ಸ.ಪ.ಪೂ.ಕಾಲೇಜು ಕೊಕ್ರಾಡಿಯಲ್ಲಿ ನಿವೃತ್ತಿ ಹೊಂದಿದ ಪ್ರಾಂಶುಪಾಲ ನೋರ್ಬರ್ಟ್ ಮಾರ್ಟಿಸ್ ರವರಿಗೆ ಬೀಳ್ಕೊಡುಗೆ ಸಮಾರಂಭ

0

ಕೊಕ್ರಾಡಿ: ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ನಿವೃತ್ತಿ ಹೊಂದಿದ ನೋರ್ಬರ್ಟ್ ಮಾರ್ಟಿಸ್ ರವರಿಗೆ ಸನ್ಮಾನ ಹಾಗೂ ಬೀಳ್ಕೊಡುಗೆ ಸಮಾರಂಭವು ಕಾಲೇಜಿನ ಸಭಾಂಗಣದಲ್ಲಿ ಮೇ.31ರಂದು ನಡೆಯಿತು.

ಅಂಡಿಂಜೆ ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರೂ ಆಗಿರುವ ಮೋಹನ ಅಂಡಿಂಜೆ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ಪ್ರಾಂಶುಪಾಲರ ಉತ್ತಮ ವ್ಯಕ್ತಿತ್ವವನ್ನು, ಕಾಲೇಜಿನಲ್ಲಿ ಅವರು ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಅಭಿನಂದಿಸಿ ಅವರ ನಿವೃತ್ತಿ ಜೀವನಕ್ಕೆ ಶುಭ ಹಾರೈಸಿದರು.

ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಚಂದ್ರಶೇಖರ ಭಟ್, ಸರ್ಕಾರಿ ಪದವಿ ಪೂರ್ವ ಕಾಲೇಜು ಅಳದಂಗಡಿಯ ಪ್ರಾಂಶುಪಾಲ ಸನ್ನಿ , ನಡ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ್, ಮುನಿಯಾಲು ಸರ್ಕಾರಿ ಪದವಿಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕಿ ಜಯಶ್ರೀ, ಸರ್ಕಾರಿ ಪ್ರೌಢಶಾಲೆ ಕೊಕ್ರಾಡಿಯ ಮುಖ್ಯೋಪಾಧ್ಯಾಯ ಮಹಮ್ಮದ್ ರಿಯಾಜ್ ಮತ್ತು ಇತರ ಅತಿಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಾಂಶುಪಾಲರ ನಿವೃತ್ತಿ ಜೀವನಕ್ಕೆ ಶುಭ ಹಾರೈಸಿದರು. ಕಾಲೇಜಿನ ಅಭಿವೃದ್ಧಿ ಸಮಿತಿ ಸದಸ್ಯರು, ಊರಿನ ಗಣ್ಯರು, ಪೋಷಕರು, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕ ದಯಾನಂದ ಸ್ವಾಗತಿಸಿ, ಪ್ರಾಂಶುಪಾಲರು ಕಾಲೇಜಿಗೆ ನೀಡಿದ ಸೇವೆಯನ್ನು ಅಭಿನಂದಿಸಿ ಅವರ ನಿವೃತ್ತಿ ಜೀವನಕ್ಕೆ ಶುಭ ಹಾರೈಸಿದರು.

ಆಂಗ್ಲ ಭಾಷಾ ಉಪನ್ಯಾಸಕಿ ಲಕ್ಷ್ಮಿ ಕಾರ್ಯಕ್ರಮವನ್ನು ನಿರೂಪಿಸಿದರು. ಇತಿಹಾಸ ಉಪನ್ಯಾಸಕಿ ಸುಷ್ಮಾ ವಂದಿಸಿದರು.

LEAVE A REPLY

Please enter your comment!
Please enter your name here