ಬೆಳ್ತಂಗಡಿ: ಸಾಮಾಜಿಕ ಜಾಲತಾಣವಾದ Instagramನ bantwal_hindu_warriors ಎಂಬ ಖಾತೆಯಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡುವಂತಹ ಹಾಗೂ ಕೋಮು ಸೌಹಾರ್ದತೆಯನ್ನು ಹಾಳುಗೆಡವುವಂತಹ ಪೋಸ್ಟ್ ಪ್ರಸಾರ ಮಾಡಿರುವುದರಿಂದಾಗಿ ಕಾನೂನು ಸುವ್ಯವಸ್ಥೆಗೆ ದಕ್ಕೆಯಾಗುವ ಸಾಧ್ಯತೆಗಳಿರುವುದರಿಂದ ದಿನಾಂಕ: 01.06.2025 ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ:25/2025 ಕಲಂ: 196(1)(ಎ), 353(1) (ಸಿ) BNS 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದ್ದು, ಮುಂದಿನ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.