Site icon Suddi Belthangady

ಪ.ಜಾತಿ ಮತ್ತು ಪ.ವರ್ಗಗಳ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

ಬೆಳ್ತಂಗಡಿ: 2025-26ನೇ ಸಾಲಿನ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಹಾಗೂ ಪ.ವರ್ಗದ ಮೆಟ್ರಿಕ್ ಪೂರ್ವ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುತ್ತದೆ. ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಎಸ್‌.ಎಸ್.ಪಿ ವಿದ್ಯಾರ್ಥಿ ವೇತನಕ್ಕೆ ನೋಂದಣಿ ಮಾಡಿರಬೇಕು ಹಾಗೂ ಎಸ್.ಎಸ್.ಪಿ ನೋಂದಣಿ ಸಂಖ್ಯೆಯನ್ನು ನಮೂದಿಸಬೇಕು. ವಿಧ್ಯಾರ್ಥಿಗಳು ಇಲಾಖಾ ವೆಬ್ ಸೈಟ್ ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ವಿಧಾನ: ಪರಿಶಿಷ್ಟ ಜಾತಿ ಮೆಟ್ರಿಕ್ ಪೂರ್ವ ಮತ್ತು ನಂತರದ ವಿದ್ಯಾರ್ಥಿ ನಿಲಯಗಳಿಗೆ:swd.karnataka.gov.in, ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ: twd Karnataka.gov.in ವೆಬ್ ಸೈಟ್ ಗಳಲ್ಲಿ ಅರ್ಜಿ ಸಲ್ಲಿಸಬಹುದು.

Exit mobile version