Site icon Suddi Belthangady

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವದ ಸಂಭ್ರಮ

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಜೂ.2 ರಂದು ಪುನಾರಂಭಗೊಂಡಿದ್ದು, ಬೇಸಿಗೆ ರಜೆಯನ್ನು ಮುಗಿಸಿ ಬಂದ ವಿದ್ಯಾರ್ಥಿಗಳನ್ನು 2025-26ನೇ ಶೈಕ್ಷಣಿಕ ಸಾಲಿನ ಮೊದಲನೇ ದಿನ‌ ಸಂಭ್ರಮದಿಂದ ಬರ ಮಾಡಿಕೊಳ್ಳಲಾಯಿತು.

ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆ ಶೈಕ್ಷಣಿಕ ಸಂಯೋಜಕ ಎಸ್.ಎನ್. ಕಾಕತ್ಕರ್ ಹಾಗೂ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಧನ್ಯಕುಮಾರ್ ಇವರು ದೀಪ ಪ್ರಜ್ವಲಿಸಿ, “ಶಾಲಾ ದಿನಚರಿ 2025-26” ಪುಸ್ತಕ ಬಿಡುಗಡೆಗೊಳಿಸಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆಯ ಶುಭನುಡಿಗಳೊಂದಿಗೆ ಶೈಕ್ಷಣಿಕ ವರ್ಷವನ್ನು ಶುಭಾರಂಭಗೊಳಿಸಿದರು.

ವಿದ್ಯಾರ್ಥಿಗಳನ್ನು ಸ್ವಾಗತಿಸಲು ಶಾಲಾ ಶಿಕ್ಷಕ ವೃಂದವು ಶಾಲೆಯನ್ನು ತಳಿರು ತೋರಣಗಳಿಂದ ಸಿಂಗರಿಸಿ, ಬಣ್ಣ ಕಾಗದಗಳಿಂದ ಅಲಂಕರಿಸಲಾಗಿತ್ತು. ವಿದ್ಯಾರ್ಥಿಗಳಿಗೆ ತರಗತಿ ಕೋಣೆಗಳಲ್ಲಿ ವಿವಿಧ ಚಟುವಟಿಕೆಗಳನ್ನು ಆಯೋಜಿಸಲಾಯಿತು. ಒಂದನೇ ತರಗತಿಗೆ ತೇರ್ಗಡೆಯಾಗಿರುವ ವಿದ್ಯಾರ್ಥಿಗಳನ್ನು ವಿಶೇಷವಾಗಿ ಆರತಿ ಬೆಳಗಿ ಶುಭಾಶಯ ಪತ್ರದೊಂದಿಗೆ ತಮ್ಮ ಶಾಲಾ ಜೀವನದ ಮೊದಲನೇ ದಿನವನ್ನು ಸ್ವಾಗತಿಸಲಾಯಿತು.

Exit mobile version