ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಮಹಾವೀರ ಜೈನ್ ಇಚ್ಲಂಪಾಡಿ ಇವರು ಹಂಪಿ ಕನ್ನಡ ವಿಶ್ವ ವಿದ್ಯಾಲಯದಿಂದ ಪಿ.ಹೆಚ್.ಡಿ ಪದವಿ ಪಡೆದಿದ್ದಾರೆ.
ಉಜಿರೆಯ ಡಾ. ಹಾಮಾನಾ ಸಂಶೋಧನಾ ಕೇಂದ್ರದ ಮೂಲಕ ಡಾ.ಬಿ.ಪಿ ಸಂಪತ್ ಕುಮಾರ ಅವರ ಮಾರ್ಗದರ್ಶನದಲ್ಲಿ ಕನ್ನಡ ವಿಶ್ವವಿದ್ಯಾಲಯ ಹಂಪಿಗೆ ಸಲ್ಲಿಸಿದ ‘ ಕನ್ನಡ ಜೈನ ಸಾಹಿತ್ಯದಲ್ಲಿ ಕರ್ಮಸಿದ್ಧಾಂತದ ಸ್ವರೂಪ’ ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಹಂಪಿ ವಿಶ್ವವಿದ್ಯಾಲಯವು ಪಿಹೆಚ್.ಡಿ ಪದವಿಯನ್ನು ನೀಡಿದೆ.
ಇವರು ಧಾರ್ಮಿಕ ಉಪನ್ಯಾಸಕ, ಅನೇಕ ಶಾಸ್ತ್ರದಾನ ಪುಸ್ತಕಗಳ ಸಂಪಾದಕರು, ಚಾವಡಿ ಚರ್ಚೆ ಕಾರ್ಯಕ್ರಮಗಳಲ್ಲಿಯೂ ಭಾಗವಹಿಸಿದ್ದಾರೆ. ನೆಲ್ಯಾಡಿ ಜೇಸಿಐ ಇದರ ಪೂರ್ವಾಧ್ಯಕ್ಷರು ಹಾಗೂ ಭಾರತೀಯ ಜೈನ್ ಮಿಲನ್ ಇದರ ಇಚ್ಲಂಪಾಡಿ ಶಾಖೆಯ ಪೂರ್ವಾಧ್ಯಕ್ಷರು ಆಗಿದ್ದರು.