ಮಾಲಾಡಿ ಶಾಲಾ ಪ್ರಾರಂಭೋತ್ಸವ, ಉಚಿತ ನೋಟ್ ಬುಕ್, ಕೊಡೆ ವಿತರಣೆ

0

ಮಾಲಾಡಿ: ಮಾಲಾಡಿ ಸ. ಉ. ಪ್ರಾ. ಶಾಲೆಯಲ್ಲಿ ಜೂ. 2ರಂದು ಶಾಲಾ ಪ್ರಾರಂಭೋತ್ಸವವನ್ನು ಗ್ರಾಮ ಪಂಚಾಯತ್ ಸದಸ್ಯೆ ತುಳಸಿ ಹಾಗೂ ಜಯಂತಿ ಇವರು ದೀಪ ಬೆಳಗಿಸಿ ಉದ್ಘಾಟಿಸಿದರು. ಎಸ್. ಡಿ. ಎಂ. ಸಿ ಅಧ್ಯಕ್ಷ ಹಕೀಮ್ ಅಧ್ಯಕ್ಷತೆ ವಹಿಸಿದ್ದರು.

ಸ್ಕೌಟ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಮಡಂತ್ಯಾರು ಇದರ ಅಧ್ಯಕ್ಷ ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಪ್ರತಿವರ್ಷದಂತೆ ಈ ವರ್ಷವೂ ಎಲ್ಲಾ ವಿದ್ಯಾರ್ಥಿಗಳಿಗೆ ಕೊಡೆ ಹಾಗೂ ನೋಟ್ ಬುಕ್ ಗಳನ್ನು ಉಚಿತವಾಗಿ ನೀಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ವೇದಿಕೆಯಲ್ಲಿ ಎಸ್. ಡಿ ಎಂ. ಸಿ ಉಪಾಧ್ಯಕ್ಷೆ ಪುಷ್ಪಲತಾ ಎಲ್ಲಾ ಎಸ್‌.ಡಿ.ಎಂ.ಸಿ ಸದಸ್ಯರು ಉಪಸ್ಥಿತರಿದ್ದರು. ಸರಕಾರದಿಂದ ಉಚಿತವಾಗಿ ನೀಡುವ ಪಠ್ಯಪುಸ್ತಕಗಳನ್ನು ವಿತರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯಿನಿ ಲತಾ ಕೆ. ಸ್ವಾಗತಿಸಿ, ಇಲಾಖಾ ಮಾಹಿತಿಯನ್ನು ನೀಡಿದರು. ದೈಹಿಕ ಶಿಕ್ಷಣ ಶಿಕ್ಷಕ ಜಯರಾಜ್ ಜೈನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಶಾಂತ್ ಕಾಮತ್ ವಂದಿಸಿದರು.

LEAVE A REPLY

Please enter your comment!
Please enter your name here