ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ: ಬಿಗಿ ಪೊಲೀಸ್ ಭದ್ರತೆಯಲ್ಲಿ ಸ್ಥಳ ಮಹಜರು:ಆರೋಪಿಗಳನ್ನು ಬೆಳ್ತಂಗಡಿಗೆ ಕರೆ ತಂದ ಪೊಲೀಸರು

0

ಬೆಳ್ತಂಗಡಿ: ಬಂಟ್ವಾಳ ತಾಲೂಕಿನ ಕುರಿಯಾಲ್ ಗ್ರಾಮದ ಇರಕೋಡಿಯಲ್ಲಿ ಮೇ. 27ರಂದು ನಡೆದ ಅಬ್ದುಲ್ ರಹಿಮಾನ್ ಕೊಲೆ ಮತ್ತು ಕಲಂದರ್ ಶಾಫಿ ಮೇಲೆ ನಡೆದ ಭೀಕರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಜೂ.2ರಂದು ಆರೋಪಿಗಳನ್ನು ಬೆಳ್ತಂಗಡಿಯ ನಾಲ್ಕು ಸ್ಥಳಗಳಿಗೆ ಕರೆತಂದು ಸ್ಥಳ ಮಹಜರು ಪ್ರಕ್ರಿಯೆ ನಡೆಸಿದ್ದಾರೆ.

ಹತ್ಯೆಗೂ ಮೊದಲು ಮತ್ತು ನಂತರ ಆರೋಪಿಗಳು ಬಂದಿರುವ ಸ್ಥಳಗಳ ಬಗ್ಗೆ ಮಹಜರು ನಡೆಸಲಾಯಿತು.

ಈ ವೇಳೆ ಆರೋಪಿಗಳ ಹೇಳಿಕೆಯನ್ನು ಆಡಿಯೋ – ವೀಡಿಯೋ ಸಹಿತ ದಾಖಲಿಸಲಾಯಿತು. ಈ ಸಂದರ್ಭ ಸ್ಥಳದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು. ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ಮುಂಡರಕೋಡಿ ನಿವಾಸಿ ದೀಪಕ್(21) ಮತ್ತು ಬಂಟ್ವಾಳ ತಾಲೂಕಿನ ತೆಂಕಬೆಳ್ಳುರು ಗ್ರಾಮದ ಸುಮಿತ್ ಆಚಾರ್ಯ(27) ನನ್ನು ಬಂಟ್ವಾಳ ಡಿವೈಎಸ್ಪಿ ವಿಜಯ ಪ್ರಸಾದ್‌ ನೇತೃತ್ವದಲ್ಲಿ ಬಿಗಿ ಪೊಲೀಸ್ ಭದ್ರತೆಯಲ್ಲಿ ಗುರುವಾಯನಕೆರೆಯ ಅಂಗಡಿ, ಬೆಳ್ತಂಗಡಿಯ ಸಂತೆಕಟ್ಟೆ ಮೊಬೈಲ್ ಅಂಗಡಿ, ಬೆಳ್ತಂಗಡಿ ಮೂರು ಮಾರ್ಗದ ಬಳಿ ಹಾಗೂ ನಿಡಿಗಲ್ ಬಳಿ ಕರೆತಂದು ಸ್ಥಳ ಮಹಜರು ನಡೆಸಿದ್ದಾರೆ ಎಂದು ವರದಿಯಾಗಿದೆ.

LEAVE A REPLY

Please enter your comment!
Please enter your name here