Site icon Suddi Belthangady

ಬೆಳಾಲು ಶ್ರೀ ಧ. ಮಂ.ಅ.ಪ್ರೌಢ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

ಬೆಳಾಲು: ಶ್ರೀ ಧ. ಮಂ.ಅ.ಪ್ರೌಢ ಶಾಲೆಯಲ್ಲಿ 2025-26ನೇ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಕಾರ್ಯಕ್ರಮ ಜೂ.2ರಂದು ಜರಗಿತು.

ಕಾರ್ಯಕ್ರಮವನ್ನು ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ ಉದ್ಘಾಟಿಸಿ, ಪಠ್ಯಪುಸ್ತಕ ವಿತರಿಸಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಶಿಕ್ಷಕ ಸುಮನ್ ಯು.ಎಸ್ ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.

Exit mobile version