ಬೆಳ್ತಂಗಡಿ: ಎಸ್. ಡಿ. ಎಂ. ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ ಬೆಳ್ತಂಗಡಿಯ ಎಸ್. ಡಿ .ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಜೂ. 2ರಂದು ನಡೆಯಿತು. ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 7ನೇ ಸ್ಥಾನ ಪಡೆದ ಶಾಲೆಯ ಹಿರಿಯ ವಿದ್ಯಾರ್ಥಿಗಳಾದ ಸನ್ನಿಧಿ ಎಸ್. ಹೆಗ್ಡೆ ಹಾಗೂ ದಿಯಾ ಕಾರ್ಯಕ್ರಮ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಮುಖ್ಯ ಶಿಕ್ಷಕಿ ಹೇಮಲತಾ ಎಂ. ಆರ್. ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕ, ಶಿಕ್ಷಕೇತರ ವೃಂದ ಹಾಗೂ ಪೋಷಕರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗಾಗಿ ಬ್ಲೈಂಡ್ ವೇ, ಬ್ಯಾಲೆನ್ಸಿಂಗ್, ಪಾಸ್ ದ ಕ್ಯಾಪ್, ಪಗಡೆ ಆಟ ಮುಂತಾದ ಮನೋರಂಜನಾ ಆಟಗಳನ್ನು ಇದೇ ಸಂದರ್ಭದಲ್ಲಿ ಹಮ್ಮಿಕೊಳ್ಳಲಾಗಿತ್ತು. ಶಿಕ್ಷಕಿಯರಾದ ಕಸ್ತೂರಿ ಸ್ವಾಗತಿಸಿದರು. ಶಿಕ್ಷಕ ಮುರಳಿ ಕಾರ್ಯಕ್ರಮ ನಿರೂಪಿಸಿದರು. ನೀತಾ ವಂದಿಸಿದರು.