ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ನಡೆಯಿತು. ಆಗಮಿಸಿದ ವಿದ್ಯಾರ್ಥಿಗಳಿಗೆ ಅರಿಶಿನ ಕುಂಕುಮ ಹಾಗೂ ಪನ್ನೀರಿನೊಂದಿಗೆ ಬೊಂಬೆ ವೇಷದೊಂದಿಗೆ ಸ್ವಾಗತ ಕೋರಲಾಯಿತು.ಬಳಿಕ ಶಾಲಾ ಮುಖ್ಯೋಪಾಧ್ಯಾಯಿನಿ ಪರಿಮಳ ಎಂ. ವಿ. ಹಾಗೂ ಹೊಸ ವಿದ್ಯಾರ್ಥಿಗಳು ಹಾಗೂ ಎಸ್. ಎಸ್. ಎಲ್. ಸಿ ಯಲ್ಲಿ ಅತ್ಯುತ್ತಮ ಸಾಧನೆಗೈದ ವಿದ್ಯಾರ್ಥಿಗಳು ಜೊತೆಯಾಗಿ ದೀಪ ಪ್ರಜ್ವಲಿಸಿ ಈ ವರ್ಷದ ಆರಂಭಕ್ಕೆ ಮುನ್ನುಡಿ ಬರೆದರು. ಬಳಿಕ ಎಸ್. ಎಸ್. ಎಲ್. ಸಿ ಯಲ್ಲಿ ಅತ್ಯುತ್ತಮ ಸಾಧನೆಗೈದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಶಾಲಾ ಮುಖ್ಯೋಪಾಧ್ಯಾಯಿನಿ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿ ಶುಭ ಹಾರೈಸಿದರು. ಶಾಲಾ ಶಿಕ್ಷಕ ವೃಂದ ಸ್ವರಚಿತ ಹಾಡುಗಳನ್ನು ಹಾಡಿ ವಿದ್ಯಾರ್ಥಿಗಳನ್ನು ಸ್ವಾಗತಿಸಿದರು. ವಿದ್ಯಾರ್ಥಿಗಳಿಗೆ ಬೇರೆ ಬೇರೆ ಆಟ ಆಡಿಸಿ ಪ್ರತಿಭೆಗಳಿಗೆ ವೇದಿಕೆ ನೀಡಿ ಮೊದಲ ದಿನ ಸಂಭಮದಿಂದ ಇರುವಂತೆ ನೋಡಿಕೊಳ್ಳಲಾಗಿತ್ತು. ಶಾಲೆ ಮದುವಣಗಿತ್ತಿಯಂತೆ ಸಿಂಗಾರಗೊಂಡಿತ್ತು.