ಉರುವಾಲು: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲಾ ಪ್ರಾರಂಭೋತ್ಸವ

0

ಉರುವಾಲು: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ 2025-26ನೇ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಕಾರ್ಯಕ್ರಮವು ವಿಜೃಂಭಣೆಯಿಂದ ನಡೆಯಿತು. ವಿದ್ಯಾರ್ಥಿಗಳೆಲ್ಲರನ್ನು ಬ್ಯಾಂಡ್ ನೊಂದಿಗೆ ಮೆರವಣಿಗೆ ಮೂಲಕ ಬರಮಾಡಿಕೊಳ್ಳಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಶೋಭಿತ ಕೆ.ಆರ್. ಸಹ ಶಿಕ್ಷಕರೊಂದಿಗೆ ಸೇರಿ ಎಲ್ಲಾ ವಿದ್ಯಾರ್ಥಿಗಳನ್ನು ಆರತಿ ಬೆಳಗಿ ಹಣೆಗೆ ತಿಲಕವಿಟ್ಟು ಸ್ವಾಗತಿಸಲಾಯಿತು.

ಸೇವಾ ಸಮಿತಿಯ ದಿಗ್ಧರ್ಶಕ ಈಶ್ವರ ಭಟ್ ಮಾಯಿಲ್ತೊಡಿ ಮಾತನಾಡಿ ಹೊಸ ಶೈಕ್ಷಣಿಕ ವರ್ಷಕ್ಕೆ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಪ್ರಾರಂಭೋತ್ಸವ ಹಿನ್ನಲೆಯಲ್ಲಿ ಮಕ್ಕಳಿಗೆ ಮದ್ಯಾಹ್ನದ ಬಿಸಿಯೂಟ ಜೊತೆಗೆ ಪಾಯಸ, ಸಿಹಿ ತಿಂಡಿ ನೀಡಲಾಯಿತು.ಹಾಗೂ ಕಾರ್ಯಕ್ರಮದಲ್ಲಿ ಸೇವಾ ಸಮಿತಿಯ ಸದಸ್ಯರು, ಶಿಕ್ಷಕ ವೃಂದದವರು ಹಾಜರಿದ್ದರು.

LEAVE A REPLY

Please enter your comment!
Please enter your name here