ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವದ ಉದ್ಘಾಟನಾ ಸಮಾರಂಭ

0

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2025-26ನೇ ಶೈಕ್ಷಣಿಕ ವರ್ಷದ ಉದ್ಘಾಟನಾ ಸಮಾರಂಭವು ಜೂ. 3ರಂದು ಸೇಕ್ರೆಡ್ ಹಾರ್ಟ್ ಸಮುದಾಯ ಭವನದಲ್ಲಿ ನಡೆಯಿತು.
ಪ್ರಾರ್ಥನಾ ವಿಧಿಯೊಂದಿಗೆ ಪ್ರಾರಂಭವಾದ ಸಮಾರಂಭದಲ್ಲಿ ಶಾಲಾ ಸಂಚಾಲಕರು ಹಾಗೂ ಇತರ ಗಣ್ಯರು ದೀಪ ಬೆಳಗಿಸುವುದರ ಮೂಲಕ 2025-26ನೇ ಸಾಲಿನ ಶೈಕ್ಷಣಿಕ ವರ್ಷವನ್ನು ಉದ್ಘಾಟಿಸಿದರು.

ಈ ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಶಾಲಾ ಸಂಚಾಲಕ ಸ್ವಾ. ಸ್ಟ್ಯಾನಿ ಗೋವಿಯಸ್ ಇವರು ವಹಿಸಿದ್ದರು. ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಮಕ್ಕಳನ್ನು ಉದ್ದೇಶಿಸಿ ಮಾತನಾಡಿ ನಾವು ಉತ್ಸಾಹದಿಂದ ನಮ್ಮ ಜೀವನವನ್ನು ಪ್ರಾರಂಭಿಸಿದಾಗ ನಾವು ಯಶಸ್ಸನ್ನು ಕಾಣುತ್ತೇವೆ ಎಂದು ಹೇಳಿ ಮಕ್ಕಳಿಗೆ ಶುಭ ಹಾರೈಸಿದರು.

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಅಭಿನಂದನೆಗಳನ್ನು ಸಲ್ಲಿಸಿದರು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾದ ಪ್ರೊ. ಲಿಯೋ ನೊರೊನ್ಹ ಇವರು ಆಗಮಿಸಿದ್ದರು. ಅವರು ಮಕ್ಕಳನ್ನು ಉದ್ದೇಶಿಸಿ ಮಾತನಾಡಿ ನಮ್ಮ ಜೀವನದಲ್ಲಿ ಒಂದು ಗುರಿ ಇರಬೇಕು ಆಗ ನಾವು ಯಶಸ್ಸನ್ನು ಕಾಣಬಹುದು ಎಂದು ಹೇಳಿ ಮಕ್ಕಳಿಗೆ ಶುಭ ಹಾರೈಸಿದರು.

ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಅಂಕವನ್ನು ಗಳಿಸಿದ ಸ್ವರ್ಣ ಗೌರಿ ನಾಯಕ್, ಈಸ ಗಿಬ್ಸನ್ ತಾವ್ರೋ, ಪರ್ಲ್ ತಾವ್ರೋ, ಜೋಷ್ಮಾ ಜೋಯಿಸ್, ತೃಪ್ತಿ ಎಸ್.ಜೆ ಇವರನ್ನು ಅವರ ಹೆತ್ತವರೊಂದಿಗೆ ಸನ್ಮಾನಿಸಿ ಅಭಿನಂದಿಸಲಾಯಿತು.

ಶಾಲೆಗೆ ಹೊಸದಾಗಿ ನೇಮಕಗೊಂಡ ಶಿಕ್ಷಕ- ಶಿಕ್ಷಕಿಯರನ್ನು ಮತ್ತು ಹೊಸದಾಗಿ ದಾಖಲಾದ ವಿದ್ಯಾರ್ಥಿಗಳನ್ನು ಸಭೆಗೆ ಪರಿಚಯಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯ ಸ್ವಾ|ದೀಪಕ್ ಲಿಯೊ ಡೇಸ ಇವರು ಎಲ್ಲ ವಿದ್ಯಾರ್ಥಿಗಳನ್ನು ಸ್ವಾಗತಿಸಿ ಶುಭ ಹಾರೈಸಿದರು.

ಈ ಕಾರ್ಯಕ್ರಮದಲ್ಲಿ ಮಡಂತ್ಯಾರು ಚರ್ಚ್ ಸಹಾಯಕ ಧರ್ಮ ಗುರು ಸ್ವಾ| ಲ್ಯಾರಿ ಪಿಂಟೋ, ಮಡಂತ್ಯಾರು ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ಜೆರಾಲ್ಡ್ ಮೊರಸ್ ರವರು, ಶಿಕ್ಷಕ- ರಕ್ಷಕ ಸಂಘದ ಉಪಾಧ್ಯಕ್ಷ ವಿನಯ್ ಡಿಸೋಜ, ಶಾಲಾ ಆಡಳಿತ ಮಂಡಳಿಯ ಸದಸ್ಯರು, ಶಿಕ್ಷಕ-ರಕ್ಷಕ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಈ ಕಾರ್ಯಕ್ರಮವನ್ನು ಶಿಕ್ಷಕ ಮಂಜುನಾಥ ನಿರೂಪಿಸಿ, ವಿನ್ನಿ ಲೋಬೋ ಸ್ವಾಗತಿಸಿ, ಐಡ ಡಿಕುನ್ಹಾ ರವರು ಧನ್ಯವಾದಗಳನ್ನು ಸಮರ್ಪಿಸಿದರು.

LEAVE A REPLY

Please enter your comment!
Please enter your name here