Site icon Suddi Belthangady

ಕನ್ಯಾಡಿ ಸ.ಉ.ಪ್ರಾ.ಶಾಲಾ ಪ್ರಾರಂಭೋತ್ಸವ

ಧರ್ಮಸ್ಥಳ: ಕನ್ಯಾಡಿ 2 ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2025-26ನೇ ಸಾಲಿನ ಶಾಲಾ ಪ್ರಾರಂಭೋತ್ಸವವೂ ವಿಜೃಂಭಣೆಯಿಂದ ನಡೆಯಿತು. ಪ್ರಸ್ತುತ ವರ್ಷದಲ್ಲಿ ಶಾಲೆಯ ವಿವಿಧ ತರಗತಿಗಳಿಗೆ ಹೊಸದಾಗಿ ಸೇರ್ಪಡೆಗೊಂಡ ಮಕ್ಕಳನ್ನು ಸಿಹಿ ಮತ್ತು ಬಲೂನನ್ನು ನೀಡುವ ಮೂಲಕ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಎಸ್. ಡಿ. ಎಂ. ಸಿ ಅಧ್ಯಕ್ಷ ಕೆ.ನಂದ, ಉಪಾಧ್ಯಕ್ಷೆ ಚಂದ್ರಾವತಿ, ಧರ್ಮಸ್ಥಳ ಗ್ರಾಮ ಪಂಚಾಯತ್ ಸದಸ್ಯರಾದ ಭಾರತಿ, ವಸಂತ ನಾಯ್ಕ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮನೋಹರ್ ರಾವ್, ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಪುಷ್ಪಾ ಎನ್. ಮಕ್ಕಳಿಗೆ ಉಚಿತ ಪಠ್ಯಪುಸ್ತಕವನ್ನು ನೀಡುವ ಮೂಲಕ ಶುಭ ಹಾರೈಸಿದರು. ಎಸ್.ಡಿ.ಎಂ.ಸಿ ಸದಸ್ಯರು, ಶಾಲಾ ಶಿಕ್ಷಕ ವೃಂದ, ಪೋಷಕರು, ಶಾಲಾ ಮಕ್ಕಳು, ಹಿರಿಯ ವಿದ್ಯಾರ್ಥಿಗಳು ಊರಿನ ವಿದ್ಯಾಭಿಮಾನಿಗಳು ಉಪಸ್ಥಿತರಿದ್ದರು.

Exit mobile version