ಉಜಿರೆ ಎಸ್.ಡಿ.ಎಮ್ ಇಂಜಿನಿಯರಿಂಗ್ ಕಾಲೇಜಿಗೆ ಸತತ ಮೂರನೇ ಬಾರಿಗೆ ಶೇ.100 ಫಲಿತಾಂಶ

0

ಉಜಿರೆ: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 2024-25ನೇ ಸಾಲಿನ ಅಂತಿಮ ವರ್ಷದ ಪರೀಕ್ಷೆಯಲ್ಲಿ ಶ್ರೀ ಧ. ಮಂ. ಇಂಜಿನಿಯರಿಂಗ್ ಕಾಲೇಜಿನ ಎಲ್ಲಾ ಆರು ವಿಭಾಗಗಳೂ ಶೇ.100 ಫಲಿತಾಂಶ ಪಡೆದುಕೊಂಡಿವೆ. ಒಟ್ಟು 407 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 406 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಮತ್ತು ಒಬ್ಬ ವಿದ್ಯಾರ್ಥಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಕಳೆದ ಮೂರು ವರ್ಷಗಳಿಂದಲೂ ಸತತವಾಗಿ ಶೇ.100 ಫಲಿತಾಂಶ ದಾಖಲಾಗುತ್ತಿದ್ದು, ಈ ಸಾಧನೆಗಾಗಿ ವಿದ್ಯಾರ್ಥಿ ಮತ್ತು ಪ್ರಾದ್ಯಾಪಕ ವೃಂದವನ್ನು ಶ್ರೀ ಧ. ಮಂ. ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಡಿ. ವೀರೇಂದ್ರ ಹೆಗ್ಗಡೆ, ಕಾರ್ಯದರ್ಶಿಗಳಾದ ಶ್ರೀ ಹರ್ಷೇಂದ್ರ ಕುಮಾರ್ ಹಾಗೂ ಡಾ. ಸತೀಶ್ ಚಂದ್ರರವರು ಅಭಿನಂದಿಸಿದ್ದಾರೆ ಎಂದು ಪ್ರಾಂಶುಪಾಲ ಡಾ. ಅಶೋಕ್ ಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here