Site icon Suddi Belthangady

ಕುವೆಟ್ಟು: ಸ.ಉ.ಹಿ.ಪ್ರಾ.ಶಾಲಾ ಪ್ರಾರಂಭೋತ್ಸವ

ಕುವೆಟ್ಟು: ಸ.ಉ.ಹಿ.ಪ್ರಾ.ಶಾಲೆಯಲ್ಲಿ 2025-26ನೇ ಸಾಲಿನ ಶೈಕ್ಷಣಿಕ ಪ್ರಾರಂಭೋತ್ಸವ ಜರುಗಿತು. ಶಾಲಾ ವಿದ್ಯಾರ್ಥಿಗಳನ್ನು ಬ್ಯಾಂಡ್ ಸೆಟ್ ನೊಂದಿಗೆ ಗುಲಾಬಿ ಹೂವನ್ನು ನೀಡಿ ಸ್ವಾಗತಿಸಲಾಯಿತು. ಸಿಹಿ ತಿಂಡಿ ನೀಡಲಾಯಿತು‌.

ಸಭಾ ಕಾರ್ಯಕ್ರಮವನ್ನು ಕುವೆಟ್ಟು ಗ್ರಾ.ಪo. ಸದಸ್ಯ ಸಿಲ್ವೆಸ್ಟರ್ ಮೋನಿಸ್ ಉದ್ಘಾಟಿಸಿ ಶುಭ ಹಾರೈಸಿದರು. ಶಾಲಾ ಎಸ್. ಡಿ. ಎಂ. ಸಿ ಅಧ್ಯಕ್ಷ ಸಿರಾಜ್ ಎಂ. ಚಿಲಿಂಬಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕುವೆಟ್ಟು ಗ್ರಾಮ ಪಂಚಾಯತ್ ಸದಸ್ಯೆ ಅಮೀನಾ, ಶಾಲಾ ಎಸ್. ಡಿ. ಎಂ. ಸಿ ಸದಸ್ಯರು ಹಾಗೂ ಶಾಲಾ ಮುಖ್ಯ ಶಿಕ್ಷಕ ಭಾಸ್ಕರ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯಿಂದ ನೀಡಿದ ಉಚಿತ ಪಠ್ಯಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿ, ಶಾಲಾ ಶಿಕ್ಷಕಿ ಶಶಿಕಲಾ ನಿರೂಪಿಸಿ, ಶಾಲಾ ಶಿಕ್ಷಕ ಕಿರಣ್ ಎಸ್. ಪಿ. ವಂದಿಸಿದರು.

Exit mobile version