ಓಡಿಲ್ನಾಳ ಶಾಲಾ ಪ್ರಾರಂಭೋತ್ಸವ

0

ಓಡಿಲ್ನಾಳ: ಜೂ. 2ರಂದು ಸ. ಉ. ಪ್ರಾ. ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವವನ್ನು ಬಹಳ ಸಂಭ್ರಮ ಸಡಗರದಿಂದ ನಡೆಸಲಾಯಿತು. ತಳೀರು ತೋರಣಗಳನ್ನು ಕಟ್ಟಿ ಅಲಂಕಾರಗೊಂಡ ಶಾಲೆ, ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಶೆಟ್ಟಿ ಉಪಸ್ಥಿತಿಯಲ್ಲಿ ಶಾಲೆಗೆ ದಾಖಲಾದ ವಿದ್ಯಾರ್ಥಿಗಳಿಗೆ ಗುಲಾಬಿ ಹೂಗಳನ್ನು ನೀಡಿ ಆತ್ಮೀಯವಾಗಿ ಸ್ವಾಗತಿಸಿದರು.

ಎಸ್. ಡಿ. ಎಂ. ಸಿ ಅಧ್ಯಕ್ಷೆ ಪ್ರಮೀಳಾ ಶೆಟ್ಟಿ ದೀಪವನ್ನು ಪ್ರಜ್ವಲಿಸಿ ಶುಭ ಹಾರೈಸಿದರು. ಬಲೂನುಗಳನ್ನು ವಿದ್ಯಾರ್ಥಿಗಳಿಗೆ ನೀಡಿ ಮನರಂಜಿಸಿದರು. ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮವನ್ನು ಅಧ್ಯಕ್ಷರ ಸಮ್ಮುಖದಲ್ಲಿ ನಡೆಸಲಾಯಿತು. ಶಾಲಾ ಮುಖ್ಯೋಪಾಧ್ಯಾಯಿನಿ ಉಷಾ ಪಿ. ಕಲಿಕಾ ಪ್ರೇರಣೆಯ ಸಂಕೇತವಾಗಿ ಪೆನ್ಸಿಲ್ ಅನ್ನು ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು.

ಕುವೆಟ್ಟು ಗ್ರಾ. ಪಂ. ಸದಸ್ಯೆ ಆನಂದಿ, ಎಸ್‌. ಡಿ. ಎಂ. ಸಿ ಸರ್ವ ಸದಸ್ಯರು, ಪೋಷಕರು, ಹಳೆ ವಿದ್ಯಾರ್ಥಿಗಳ ಸಂಪೂರ್ಣ ಸಹಕಾರದೊಂದಿಗೆ, ವಿದ್ಯಾರ್ಥಿಗಳಿಗೆ ಆರತಿ ಬೆಳಗಿ, ಬ್ಯಾಂಡ್ ವಾದ್ಯಗಳ ಘೋಷಗಳೊಂದಿಗೆ ಶಾಲಾ ಆವರಣದೊಳಗೆ ಕರೆತರಲಾಯಿತು.

ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ನೀಡಲಾಯಿತು. ಶಿಕ್ಷಕ ವೃಂದ ಹಾಗೂ ಅಡುಗೆ ಸಿಬ್ಬಂದಿಗಳ ಸಹಕಾರದೊಂದಿಗೆ ಕಾರ್ಯಕ್ರಮ ಅತ್ಯುತ್ತಮವಾಗಿ ಸಂಪನ್ನಗೊಂಡಿತು. ಸುಜಾತ ಕಾರ್ಯಕ್ರಮ ನಿರೂಪಿಸಿದರು. ಅಕ್ಷತಾ ಧನ್ಯವಾದಗಳು ಕೋರಿದರು.

LEAVE A REPLY

Please enter your comment!
Please enter your name here