ಮಚ್ಚಿನ: ಜೂ.2ರಂದು ಸರಕಾರದ ಆದೇಶದಂತೆ ಸ.ಉ.ಹಿ.ಪ್ರಾ.ಶಾಲಾ ಪ್ರಾರಂಭೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು.
ಸಮಯ ಬೆಳಿಗ್ಗೆ 10 ಗಂಟೆಗೆ ಸರಿಯಾಗಿ ಗ್ರಾ.ಪಂ.ಅಧ್ಯಕ್ಷೆ ರುಕ್ಮಿಣಿ, ಸದಸ್ಯ ಪ್ರಮೋದ್, ಎಸ್. ಡಿ. ಎಂ. ಸಿ ಅಧ್ಯಕ್ಷ ಹರೀಶ್ ಕುಮಾರ್ ಹಾಗೂ ಸಮಿತಿಯ ಸದಸ್ಯರು ಮತ್ತು ಪೋಷಕರು ಆಗಮಿಸಿ ವಿದ್ಯಾರ್ಥಿಗಳನ್ನು ಮೆರವಣಿಗೆ ಮತ್ತು ಚೆಂಡೆ, ವಾದ್ಯಸಹಿತ ಅತ್ಯಂತ ಸಡಗರದೊಂದಿಗೆ ಶಾಲಾ ಆವರಣದೊಳಗೆ ಬರಮಾಡಿಕೊಳ್ಳಲಾಯಿತು.
ಶಾಲಾ ಸಭಾಂಗಣದಲ್ಲಿ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ದೀಪ ಪ್ರಜ್ವಲನದೊಂದಿಗೆ ಚಾಲನೆ ನೀಡಲಾಯಿತು. ರುಕ್ಮಿಣಿಯವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ 2025 26ರ ಶೈಕ್ಷಣಿಕ ವರ್ಷಕ್ಕೆ ಶುಭ ಹಾರೈಸಿದರು. ಅದೇ ರೀತಿ ಪ್ರಮೋದ್ ರವರು ಮಾತನಾಡಿ ವಿದ್ಯಾರ್ಥಿಗಳ ಮುಂದಿನ ಭವಿಷ್ಯಕ್ಕೆ ಶುಭ ಹಾರೈಸಿದರು. ಮುಖ್ಯ ಶಿಕ್ಷಕಿ ಸುನಿತಾ ಶೈಕ್ಷಣಿಕ ವರ್ಷದ ಮಾಹಿತಿಯನ್ನು ನೀಡಿದರು. ವಿದ್ಯಾರ್ಥಿಗಳೆಲ್ಲರಿಗೂ ಉಚಿತ ಪಠ್ಯ ಪುಸ್ತಕಗಳನ್ನು ವಿತರಿಸಲಾಯಿತು.
ಜಿಪಿಟಿ ಶಿಕ್ಷಕಿ ದಿವ್ಯ ಸ್ವಾಗತಿಸಿದರು. ಶಾಲಾ ಪ್ರಾರಂಭೋತ್ಸವದ ಈ ಕಾರ್ಯಕ್ರಮವನ್ನು ಶಿಕ್ಷಕಿ ಮಮತಾ ನಿರೂಪಿಸಿದರು. ವಿದ್ಯಾರ್ಥಿಗಳಿಗೆಲ್ಲರಿಗೂ ಬಿಸಿ ಊಟದೊಂದಿಗೆ ಸಿಹಿ ಊಟವನ್ನು ನೀಡಲಾಯಿತು.