ಜೂ.9-20:ದ್ವಿತೀಯ ಪಿ.ಯು.ಸಿ ಪರೀಕ್ಷೆ- 3: ನಿಷೇಧಾಜ್ಞೆ ಜಾರಿ

0

ಬೆಳ್ತಂಗಡಿ: ಜೂ.9ರಿಂದ ಜೂ.20ರವರೆಗೆ ದ್ವಿತೀಯ ಪಿ.ಯು.ಸಿ ಪರೀಕ್ಷೆ-3 ನಡೆಯಲಿದ್ದು, ಇಲ್ಲಿನ ಸಂತ ಫಿಲೋಮಿನಾ ಕಾಲೇಜು ಸೇರಿದಂತೆ ದ.ಕ.ಜಿಲ್ಲೆಯ ನಾಲ್ಕು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶ ಎಂದು ಘೋಷಿಸಲಾಗಿದೆ.

ಪರೀಕ್ಷೆ ನಡೆಯುವ ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಗಳನ್ನು ಶಾಂತಿಯುತವಾಗಿ, ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀ.ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ದ.ಕ.ಜಿಲ್ಲಾ ಪ್ರಭಾರ ಜಿಲ್ಲಾಧಿಕಾರಿ ಡಾ.ಆನಂದ್‌ ಅವರು ಆದೇಶಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಪುತ್ತೂರು ದರ್ಬೆ ಸೈಂಟ್ ಫಿಲೋಮಿನಾ ಪಿ.ಯು.ಕಾಲೇಜು, ಬೆಳ್ತಂಗಡಿ ಸರ್ಕಾರಿ ಪದವಿ ಪೂರ್ವ ಕಾಲೇಜು, ಸುಳ್ಯ ತಾಲೂಕಿನ ಗಾಂಧಿನಗರ ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಬಂಟ್ವಾಳ ತಾಲೂಕಿನ ಬಿ ಮೂಡಾ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಪರೀಕ್ಷೆ ನಡೆಯಲಿದೆ.

LEAVE A REPLY

Please enter your comment!
Please enter your name here