Site icon Suddi Belthangady

ಸೈಂಟ್ ಪೀಟರ್ ಕ್ಲೇವರ್ ಆಂಗ್ಲ ಮಾಧ್ಯಮ ಶಾಲೆಯ ಪ್ರಾರಂಭೋತ್ಸವದ ಉದ್ಘಾಟನಾ ಸಮಾರಂಭ

ಅಳದಂಗಡಿ: ಸೈಂಟ್ ಪೀಟರ್ ಕ್ಲೇವರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2025- 26ನೇ ಸಾಲಿನ ಶೈಕ್ಷಣಿಕ ಉದ್ಘಾಟನಾ ಸಮಾರಂಭವು ಜೂ.2ರಂದು ನಡೆಯಿತು. ಪ್ರಾರ್ಥನಾ ವಿಧಿಯೊಂದಿಗೆ ಪ್ರಾರಂಭವಾದ ಸಮಾರಂಭವನ್ನು ಶಾಲಾ ಸಂಚಾಲಕ ಫಾ. ಎಲಿಯಾಸ್ ಡಿಸೋಜ ಹಾಗೂ ಇತರ ಗಣ್ಯರು ದೀಪ ಬೆಳಗಿಸುವುದರ ಮೂಲಕ 2025 -26ನೇ ಸಾಲಿನ ಶೈಕ್ಷಣಿಕ ವರ್ಷವನ್ನು ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಶಾಲಾ ಸಂಚಾಲಕ ಫಾ.ಎಲಿಯಾಸ್ ಡಿಸೋಜ ವಹಿಸಿದ್ದರು. ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಮಕ್ಕಳನ್ನು ಉದ್ದೇಶಿಸಿ ಮಾತನಾಡಿ, ಅವರಿಗೆ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕಿ ಮೋನಿಕಾ ಡಿಸೋಜಾ, ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷ ಶ್ಯಾಮ್ ಸುಂದರ್ ಭಟ್, ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಲಿಯೋ ಪಿರೇರಾ ಮಾತನಾಡಿ ಶುಭ ಹಾರೖಸಿದರು.

ಶಾಲಾ ಆಡಳಿತ ಮಂಡಳಿ ಸದಸ್ಯರು,ಶಿಕ್ಷಕ ಹಾಗೂ ಶಿಕ್ಷಕೇತರ ವರ್ಗದ ಸಿಬ್ಬಂದಿ ಉಪಸ್ಥಿತರಿದ್ದರು. ಸಹ ಶಿಕ್ಷಕಿ ವಿಶಾಲಾಕ್ಷಿ ಸ್ವಾಗತಿಸಿದರು. ಸಹ ಶಿಕ್ಷಕಿ ಲೀಲಾ ನಿರೂಪಿಸಿದ ಕಾರ್ಯಕ್ರಮದಲ್ಲಿ, ಸಹ ಶಿಕ್ಷಕಿ ರನಿಟಾ ಮಸ್ಕರೇನಸ್ಸ್ ವಂದಿಸಿದರು.

Exit mobile version