


ಉಜಿರೆ: ವಿಶ್ವ ಪರಿಸರ ದಿನಾಚರಣೆ ಮತ್ತು ವಿಶ್ವ ಜೀವ ವೈವಿಧ್ಯ ದಿನಾಚರಣೆ ಅಂಗವಾಗಿ ಕರ್ನಾಟಕ ಅರಣ್ಯ ಇಲಾಖೆ ಸಾಮಾಜಿಕ ಅರಣ್ಯ ವಿಭಾಗ ಮಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಮತ್ತು ಸಾಮಾಜಿಕ ಅರಣ್ಯ ವಲಯ ಬೆಳ್ತಂಗಡಿ ಇವರ ವತಿಯಿಂದ ಗ್ರಾಮದ ಅತ್ತಾಜೆ ಕೆರೆ, ಸರಕಾರಿ ಪ್ರಾಥಮಿಕ ಶಾಲೆ ಪರಿಸರದಲ್ಲಿ ವನಮಹೋತ್ಸವ ಮತ್ತು ಬೀಜದ ಉಂಡೆಗಳ ಬಿತ್ತುವಿಕೆ ಕಾರ್ಯಕ್ರಮ ನಡೆಸಲಾಯಿತು.



ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಣಾಧಿಕಾರಿ ಭವಾನಿ ಶಂಕರ್, ಬೆಳ್ತಂಗಡಿ ಸಾಮಾಜಿಕ ಅರಣ್ಯ ವಲಯದ ವಲಯಾರಣ್ಯ ಅಧಿಕಾರಿ ಲೋಕೇಶ ಎಸ್.ಎನ್., ಉಜಿರೆ ಗ್ರಾಮ ಪಂಚಾಯಿತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ, ಶಾಲೆಯ ಮುಖ್ಯೋಪಾಧ್ಯಾಯ ಐರಿನ್ ಡೇಸ, ಉಪವಲಯಾಧಿಕಾರಿ ಅಶೋಕ್, ಎಸ್.ಡಿ.ಎಂ.ಸಿ ಅಧ್ಯಕ್ಷ ಇಕ್ಬಾಲ್ ಮತ್ತು ಊರಿನ ಗ್ರಾಮಸ್ಥರು, ಶಾಲಾ ಮಕ್ಕಳು, ಅರಣ್ಯ ಇಲಾಖೆ ಸಿಬ್ಬಂದಿಗಳು ಹಾಗೂ ಪಂಚಾಯತಿ ಸಿಬ್ಬಂದಿಗಳು ಹಾಜರಿದ್ದರು.


            






