Site icon Suddi Belthangady

ಧರ್ಮಸ್ಥಳ ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಧರ್ಮಸ್ಥಳ: ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೂ. 5ರಂದು ವಿಶ್ವ ಪರಿಸರ ದಿನಾಚರಣೆಯನ್ನು ಪರಿಸರ ಸಂಘ ಮತ್ತು ಸ್ಕೌಟ್ಸ್ ಗೈಡ್ಸ್ ನ ಜಂಟಿ ಆಶ್ರಯದಲ್ಲಿ ಆಚರಿಸಲಾಯಿತು. ಶಾಲಾ ವಿದ್ಯಾರ್ಥಿಗಳು ಪ್ರತಿಜ್ಞೆ ಮಾಡುವುದರ ಮೂಲಕ ಪರಿಸರ ಸಂರಕ್ಷಣೆಯ ಜವಾಬ್ದಾರಿಯನ್ನು ಹೊತ್ತರು. ಶಾಲಾ ವಿದ್ಯಾರ್ಥಿನಿ ಅನುಜ್ಞ ಪರಿಸರ ದಿನಾಚರಣೆಯ ಕುರಿತು ಭಾಷಣ ಮಾಡಿದರು. ನಂತರ ವಿದ್ಯಾರ್ಥಿಗಳು ಸಸಿಗಳನ್ನು ನೆಟ್ಟರು. ಶಾಲಾ ಸಹ ಶಿಕ್ಷಕಿ ಸ್ಕೌಟ್ ಮಾಸ್ಟರ್ ಆಶಾ ಪ್ಲಾಸ್ಟಿಕ್ ನಿಂದ ಆಗುವ ದುಷ್ಪರಿಣಾಮಗಳನ್ನು ಹಾಗೂ ವಿದ್ಯಾರ್ಥಿಗಳ ಜವಾಬ್ದಾರಿಯನ್ನು ಮಕ್ಕಳಿಗೆ ತಿಳಿ ಹೇಳಿದರು.

ಈ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಪರಿಮಳ, ಪರಿಸರ ಸಂಘದ ಶಿಕ್ಷಕಿ ಅಮೃತ ವಿ. ಶೆಟ್ಟಿ, ಗೈಡ್ ಕ್ಯಾಪ್ಟನ್ ಗೀತಾ, ಶೀಭಾ, ದೀಕ್ಷಾ, ಸ್ಕೌಟ್ ಮಾಸ್ಟರ್ ಶಶಿಕಲಾ, ಜ್ಯೋತಿ ಕಾರ್ಯಕ್ರಮಕ್ಕೆ ಸಹಕರಿಸಿದರು.

Exit mobile version