ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ:ನಮ್ಮ ಭವಿಷ್ಯದ ಏಳಿಗೆಗಾಗಿ ಮತ್ತು ಉಳಿವಿಗಾಗಿ ಪರಿಸರವನ್ನು ಪ್ರೀತಿಸಬೇಕು: ಫಾ.ಪೌಲ್ ಸೆಬಾಸ್ಟಿನ್

0

ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಬಹಳ ಅರ್ಥಪೂರ್ಣವಾಗಿ ಜೂ.5ರಂದು ಆಚರಿಸಲಾಯಿತು.

ಸಭಾಸದರಲ್ಲಿ ಮುಖ್ಯ ಅತಿಥಿಯಾಗಿ ಹೋಲಿ ಕ್ರಾಸ್ ಚರ್ಚ್ ಮಂಜೊಟ್ಟಿಯ ಧರ್ಮ ಗುರು ರೆ. ಫಾ. ಸೆಬಾಸ್ಟಿನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಇವರು ಪರಿಸರವನ್ನು ನಾವು ಮೊದಲು ಪ್ರೀತಿಸಬೇಕು. ಪರಿಸರವಿದ್ದರೆ ಶುಚಿಯಾಗಿದ್ದರೆ ಮಾತ್ರ ನಮ್ಮ ಬದುಕು ಸುಂದರ. ನಮ್ಮ ಭವಿಷ್ಯದ ಏಳಿಗೆಗಾಗಿ ಮತ್ತು ನಮ್ಮ ಉಳಿವಿಗಾಗಿ ನಾವು ಪರಿಸರವನ್ನು ಪ್ರೀತಿಸಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಟ್ರಸ್ಟಿನ ಸಂಚಾಲಕ ಜನಾಬ್ ಸಯ್ಯದ್ ಹಬೀಬ್ ಸಾಹೇಬ್ ವಹಿಸಿಕೊಂಡಿದ್ದರು. ವೇದಿಕೆಯಲ್ಲಿ ಶಾಲಾ ಆಡಳಿತ ಟ್ರಸ್ಟಿನ ಕಾರ್ಯದರ್ಶಿ ಸಯ್ಯದ್ ಮಹಮ್ಮದ್ ಅಯ್ಯುಬ್ , ಶಾಲಾ ಮುಖ್ಯೋಪಾಧ್ಯಾಯಿನಿ ಜಾಕಿನ್ ಬಿನ್ ಹಾಗೂ ಅರಬಿಕ್ ಶಿಕ್ಷಣದ ಮುಖ್ಯೋಪಾಧ್ಯಾಯ ಶರೀಫ್ ಸಖಾಫಿ ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯಿನಿ ಜಾಕಿನ್ ಬಿ. ತಮ್ಮ ಪ್ರಾಸ್ತಾವಿಕ ಮಾತುಗಳೊಂದಿಗೆ ಅತಿಥಿಗಳನ್ನ ಸ್ವಾಗತಿಸಿ, ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು.

ಅತಿಥಿಗಳು ಹಾಗೂ ವಿದ್ಯಾರ್ಥಿಗಳು ಸಸಿಯನ್ನು ನೆಡುವುದರ ಮೂಲಕ ಅದರ ಪೋಷಣೆಯನ್ನು ಮಾಡುತ್ತೇವೆ ಎಂದು ಪ್ರತಿಜ್ಞೆಯನ್ನು ಕೈಗೊಳ್ಳಲಾಯಿತು.

ಶಾಲಾ ವಿದ್ಯಾರ್ಥಿಗಳು ಪರಿಸರ ಪ್ರೇಮವನ್ನು ಸಾರುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮವನ್ನು ನೆರವೇರಿಸಿಕೊಟ್ಟರು.10ನೇ ತರಗತಿಯ ವಿದ್ಯಾರ್ಥಿ ಮಹಮ್ಮದ್ ಶಮ್ಮಾಸ್ ಕಾರ್ಯಕ್ರಮವನ್ನು ನಿರೂಪಿಸಿದರು.

LEAVE A REPLY

Please enter your comment!
Please enter your name here