ಕಕ್ಯಪದವು: ಜೂ. 5ರಂದು ಎಲ್.ಸಿ.ಆರ್. ವಿದ್ಯಾಸಂಸ್ಥೆಯಲ್ಲಿ ಪದವಿ ಹಾಗೂ ಪದವಿಪೂರ್ವ ವಿದ್ಯಾರ್ಥಿಗಳಿಗೆ ವಾಣಿಜ್ಯ ಚಟುವಟಿಕೆಗಳ ಮೂಲಕ ವಾಣಿಜ್ಯ ನಿರ್ವಹಣಾ ತಂತ್ರಗಳ ಬಗೆಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ವಾಣಿಜ್ಯ ವಿಭಾಗದ ದ್ವಿತೀಯ ಪದವಿ ವಿದ್ಯಾರ್ಥಿಗಳ ತ್ರಯೋದಶ ತಂಡವು “ಕ್ವಿಜ್ಜಾರ್ಡ್ಸ್” 2025 ಮೂಲಕ ವಿವಿಧ ವಾಣಿಜ್ಯ ಚಟುವಟಿಕೆಗಳನ್ನು ನಡೆಸಿಕೊಟ್ಟರು.
ಹಲವಾರು ಮನೋರಂಜನಾ ಹಾಗೂ ನಿರ್ವಹಣಾ ಸ್ಪರ್ಧೆಯನ್ನು ಏರ್ಪಡಿಸಿ ವಿಜೇತ ತಂಡಗಳಿಗೆ ಬಹುಮಾನ ನೀಡಲಾಯಿತು.
ಸಂಸ್ಥೆಯ ಪ್ರಾಂಶುಪಾಲ ಜೋಸ್ಟನ್ ಲೋಬೋ, ಸಂಯೋಜಕ ಯಶವಂತ್ ಜಿ.ನಾಯಕ್, ಪದವಿ ವಿಭಾಗದ ಮುಖ್ಯಸ್ಥೆ ದೀಕ್ಷಿತಾ, ಪದವಿ ಪೂರ್ವ ವಿಭಾಗದ ಮುಖ್ಯಸ್ಥೆ ಸೌಮ್ಯ ಎನ್., ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ವಿಂದ್ಯಶ್ರೀ ಹಾಗೂ ಉಪನ್ಯಾಸಕ ವೃಂದದ ಉಪಸ್ಥಿತಿಯಲ್ಲಿ ಕಾರ್ಯಕ್ರಮವು ಯಶಸ್ವಿಯಾಗಿ ಸಂಪನ್ನಗೊಂಡಿತು.
ದ್ವಿತೀಯ ವಿಭಾಗದ ವಿದ್ಯಾರ್ಥಿ ಸಫಾ ತಸ್ಮಿಯ ಸ್ವಾಗತಿಸಿ, ವಿದ್ಯಾರ್ಥಿನಿ ಸುಪ್ರಿಯಾ ಕಾರ್ಯಕ್ರಮವನ್ನು ನಿರ್ವಹಿಸಿದರು. ಹರ್ಷಿತಾ ವಂದಿಸಿದರು.