Site icon Suddi Belthangady

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಉಜಿರೆ: ಜೂ.5ರಂದು ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಪರಿಸರದ ಕುರಿತು ವಿದ್ಯಾರ್ಥಿನಿ ಇಹಾನಿ ಭಾಷಣ ಹಾಗೂ ವಿದ್ಯಾರ್ಥಿನಿಯರಿಂದ ಗುಂಪು ಗಾಯನ, ರಸಪ್ರಶ್ನೆ, ವಿದ್ಯಾರ್ಥಿಗಳಿಗೆ ತಮ್ಮ ತರಗತಿಗಳಲ್ಲಿ ಪರಿಸರ ಸಂಬಂಧಿತ ಚಿತ್ರಕಲೆ ಸ್ಪರ್ಧೆ, ಗಿಡ ನೆಡುವ ಚಟುವಟಿಕೆಗಳು ಹಾಗೂ ಸೀಡ್ ಬಾಲ್ ತಯಾರಿಕೆಯ ಪ್ರಾತ್ಯಕ್ಷಿಕೆ ಮಾಡಲಾಯಿತು. ಜೂ.5ರಂದು ಜನ್ಮದಿನವನ್ನು ಆಚರಿಸಿದ ವಿದ್ಯಾರ್ಥಿಗಳಿಗೆ ಗಿಡವನ್ನು ಉಡುಗೊರೆಯಾಗಿ ನೀಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ಮನ್ಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.

Exit mobile version