ಪಡಂಗಡಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಡಂಗಡಿಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಜೂ. 5ರಂದು ಅರಿವು ಕೇಂದ್ರ ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಪಡಂಗಡಿಯ ವತಿಯಿಂದ ಹಮ್ಮಿಕೊಳ್ಳಲಾಯಿತು.
ಈ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯರು,ಶಾಲಾ ಶಿಕ್ಷಕರು ಹಾಗೂ ಮಕ್ಕಳು ಭಾಗವಹಿಸಿದರು.ಪರಿಸರ ಸಂರಕ್ಷಣೆಯಲ್ಲಿ ಮಕ್ಕಳ ಪಾತ್ರ ಈ ಕುರಿತು ಗ್ರಂಥಾಲಯ ಮೇಲ್ವಿಚಾರಕರು ಮಕ್ಕಳಿಗೆ ಮಾಹಿತಿಯನ್ನು ನೀಡಿದರು. ಶಾಲಾ ಮಕ್ಕಳಿಂದ ಗಿಡವನ್ನು ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಶಾಲಾ ಮುಖ್ಯೋಪಾಧ್ಯಾಯ ಮಹಮ್ಮದ್ ಪಾರೂಕ್ ಸ್ವಾಗತಿಸಿ. ಕಾರ್ಯಕ್ರಮ ನಿರೂಪಿಸಿ ಶಾಲಾ ಶಿಕ್ಷಕಿ ವಿರಾಜ್ ವಂದಿಸಿದರು.