Site icon Suddi Belthangady

ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮಚ್ಚಿನದಲ್ಲಿವಿಶ್ವ ಪರಿಸರ ದಿನಾಚರಣೆ

ಮಚ್ಚಿನ: ಜೂ. ೦೫ರಂದು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮಚ್ಚಿನ ಇಲ್ಲಿ ಇಕೋ ಕ್ಲಬ್ ಮತ್ತು ವಿಜ್ಞಾನ ಸಂಘದ ವತಿಯಿಂದ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

೮ನೇ ತರಗತಿ ವಿದ್ಯಾರ್ಥಿನಿ ತಸ್ರಿಫ ಪರಿಸರದ ಮಹತ್ವ ಮತ್ತು ಸಂರಕ್ಷಣೆ ಬಗ್ಗೆ ಮಾತನಾಡಿದರು. ವಿದ್ಯಾರ್ಥಿಗಳು ಶಾಲಾ ಪರಿಸರದಲ್ಲಿ ವಿವಿಧ ಜಾತಿಯ ಹಣ್ಣಿನ ಗಿಡಗಳನ್ನು ನೆಟ್ಟು ಸಂತಸಪಟ್ಟರು.

ತಾಯಂದಿರು ತಮ್ಮ ಮಗುವಿನ ಹೆಸರಿನಲ್ಲಿ ಒಂದೊಂದು ಗಿಡ ನೆಡುವ ಮೂಲಕ ಪರಿಸರ ದಿನವನ್ನು ವಿಶಿಷ್ಟವಾಗಿ ಆಚರಿಸಲಾಯಿತು. ಟಿಜಿಟಿ ಶಿಕ್ಷಕಿಯಾದ ಮಮತಾ ಮತ್ತು ಜಿಪಿಟಿ ಶಿಕ್ಷಕಿಯಾದ ರಾಜೀವಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

Exit mobile version