ಶ್ರೀ.ಧ.ಮಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟುವಿನಲ್ಲಿ ವಿಶ್ವ ಪರಿಸರ ದಿನಾಚರಣೆ

0

ಪುದುವೆಟ್ಟು: ಶ್ರೀ.ಧ.ಮಂ.ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟುವಿನಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಜೂನ್.05ರಂದು ಆಚರಿಸಲಾಯಿತು.

ಪುದುವೆಟ್ಟು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಶಶಿಧರ ಜಿ. ಗುಂಪಕಲ್ಲು ಇವರು ಮುಖ್ಯ ಅತಿಥಿಯಾಗಿ ಆಗಮಿಸಿ, ಸಾಂಕೇತಿಕವಾಗಿ ಸಸಿ ನೆಟ್ಟು ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವನ್ನಾಗಿಸಿದರು.

ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿ ಪರಿಸರ ದಿನಾಚರಣೆಯೂ ಒಂದೇ ದಿನಕ್ಕೆ ಸೀಮಿತವಾಗದೆ ಪರಿಸರ ಸಂರಕ್ಷಣೆಯು ನಿತ್ಯ ನಿರಂತರವಾಗಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾ ಮುಖ್ಯೋಪಾಧ್ಯಾಯರಾದ ಶೀನಪ್ಪ ಗೌಡರವರು ಪರಿಸರ ದಿನಾಚರಣೆಯ ಮಹತ್ವವನ್ನು ವಿವರಿಸಿ ವಿದ್ಯಾರ್ಥಿಗಳು ಪರಿಸರ ಕಾಳಜಿಯನ್ನು ಶಾಲಾ ಹಂತದಿಂದಲೇ ರೂಢಿಸಿಕೊಳ್ಳಬೇಕು ಎಂದರು.

ಶಿಕ್ಷಕರಾದ ಗೌರೀಶ್ ಪರಿಸರ ದಿನಾಚರಣೆಯ ಹಿನ್ನೆಲೆ ಮತ್ತು ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ವಿಸ್ತ್ರತವಾಗಿ ವಿವರಿಸಿದರು. ವಿದ್ಯಾರ್ಥಿಗಳಿಗೆ ಪರಿಸರದ ಬಗ್ಗೆ ಭಾಷಣ, ಪ್ರಬಂಧ ರಚನೆ ಮತ್ತು ಹಾಡುಗಳನ್ನು ಹಾಡಿಸಲಾಯಿತು.

ಶಾಲಾ ಹಿರಿಯ ಶಿಕ್ಷಕಿ ತೇಜಾವತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿಕ್ಷಕಿ ಶೀಲ.ಎನ್ ಸ್ವಾಗತಿಸಿದರು. ಜಿತೀಕ್ಷ ಧನ್ಯವಾದ ಸಮರ್ಪಿಸಿದರು. ಪುಷ್ಪಲತಾ ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here