Site icon Suddi Belthangady

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

ಉಜಿರೆ: ಜೂ.6ರಂದು “ಮಕ್ಕಳನ್ನು ಅವಕಾಶಗಳಿಂದ ವಂಚಿತಗೊಳಿಸಬೇಡಿ” ಎಂದು ಉಜಿರೆ ಎಸ್.ಡಿ.ಎಮ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ದಂತವೈದ್ಯೆ ಡಾ.ಮೀರಾ ಅನುಪಮಾ ಹೇಳಿದರು.

ಸಂಪನ್ಮೂಲ ವ್ಯಕ್ತಿ ಬೆಳ್ತಂಗಡಿಯ ಸಿ.ಡಿ.ಪಿ.ಒ ಪ್ರಿಯಾ ಆಗ್ನೆಸ್ ಚಕ್ಕೋ “ಮಕ್ಕಳು ದೇವರಿಂದ ದೊರೆತ ಉಡುಗೊರೆ. ಮಕ್ಕಳನ್ನು ಇತರರೊಂದಿಗೆ ಹೋಲಿಸಬಾರದು” ಎಂದು ಹೇಳಿದರು. ಇವರು ಉಜಿರೆ ಎಸ್.ಡಿ.ಎಮ್ ಪದವಿ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ನಡೆದ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯ 2025-26ನೇ ಶೈಕ್ಷಣಿಕ ಸಾಲಿನ ಕಿಂಡರ್ಗಾರ್ಟನ್ ಹಾಗೂ ಪ್ರಾಥಮಿಕ ವಿದ್ಯಾರ್ಥಿಗಳ ಪೋಷಕರ ಸಭೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಪೋಷಕರನ್ನು ಉದ್ದೇಶಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ವಿಷಯವಾರು ಶಿಕ್ಷಕರು ತಮ್ಮನ್ನು ಪರಿಚಯಿಸಿ, ಬೋಧನಾ ಶೈಲಿಯನ್ನು ವಿವರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ಮನ್ಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು. ಶಾಲಾ ಮುಖ್ಯೋಪಾಧ್ಯಾಯ ಮನ್ಮೋಹನ್ ನಾಯ್ಕ್ ಕೆ.ಜಿ. ಸ್ವಾಗತಿಸಿದರು. ಶಿಕ್ಷಕಿ ಮಮತಾ ಶೆಟ್ಟಿ ಹಾಗೂ ಶಿಕ್ಷಕಿ ನೀತು ಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.

Exit mobile version