ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ “LKG UKG ಪ್ರಾರಂಭೋತ್ಸವ”

0

ಬೆಳ್ತಂಗಡಿ: ದಿನಾಂಕ 04-06-2025 ರಂದು ವಾಣಿ ಆಂಗ್ಲ ಮಾಧ್ಯಮ ಶಾಲೆ ಹಳೆಕೋಟೆ ಬೆಳ್ತಂಗಡಿಯಲ್ಲಿ LKG – UKG ಮಕ್ಕಳಿಗೆ ನವ ಶಾಲಾ ಜೀವನಕ್ಕೆ ಹೆಜ್ಜೆ ಇಡುವ ಭಾವುಕ ಕ್ಷಣವಾಗಿದ್ದು ‘ಶಾಲಾ ಪ್ರಾರಂಭೋತ್ಸವವನ್ನು ಶಾಲಾ ಸಭಾಂಗಣದಲ್ಲಿ ಅತ್ಯಂತ ಸಂಭ್ರಮದೊಂದಿಗೆ ಆಚರಿಸಲಾಯಿತು.

ಕಾರ್ಯಕ್ರಮವು ಶಾಲಾ ಪ್ರಾರ್ಥನೆಯೊಂದಿಗೆ ಆರಂಭವಾಗಿ, ಉದ್ಘಾಟನೆಯನ್ನು ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಗಣೇಶ್ ಗೌಡ ದೀಪ ಬೆಳಗಿಸುವ ಮೂಲಕ ಶಿಕ್ಷಣದ ಮಹತ್ವದ ಜೊತೆಗೆ ಜೀವನ ಮೌಲ್ಯಗಳನ್ನು ಪುಟಾಣಿ ಮಕ್ಕಳು ಮೈಗೂಡಿಸಿಕೊಳ್ಳಬೇಕೆಂದು ಹಿತವಚನವನ್ನು ನೀಡಿ ಶುಭ ಹಾರೈಸಿದರು. ಈ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಪಟ್ಟಣ ಪಂಚಾಯತ್‌ನ ಅಧ್ಯಕ್ಷರಾದ ಟಿ. ಜಯಾನಂದ ಗೌಡರವರು ಮುಖ್ಯ ಅತಿಥಿಗಳಾಗಿ ಮಕ್ಕಳ ಕಲಿಕೆ, ಆರೋಗ್ಯ ಹಾಗೂ ಶಿಸ್ತಿನ ಬಗ್ಗೆ ಪ್ರಮುಖ ಅಂಶಗಳನ್ನು ತಿಳಿಸಿ ಶುಭವನ್ನು ಹಾರೈಸಿದರು.

ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಸುಹಾಸಿನಿ ಎ. ಸ್ವಾಗತಿಸಿದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಲಕ್ಷ್ಮೀನಾರಾಯಣ ಕೆ. ಪೋಷಕರಿಗೆ ಶಾಲೆಯ ನಿಯಮಗಳು ಮತ್ತು ಮಕ್ಕಳ ಕಲಿಕೆಯ ಬಗ್ಗೆ ವಿವರವಾಗಿ ತಿಳಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಸಹಶಿಕ್ಷಕಿ ಪವಿತ್ರ ಧನ್ಯವಾದ ಮಾಡಿದರು ಮತ್ತು ಸಹ ಶಿಕ್ಷಕಿ ವಂದನಾ ಕಾರ್ಯಕ್ರಮವನ್ನು ನಿರೂಪಿಸಿದರು.

LEAVE A REPLY

Please enter your comment!
Please enter your name here