Site icon Suddi Belthangady

ಸೈಂಟ್ ಪೀಟರ್ ಕ್ಲೇವರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಅಳದಂಗಡಿ: ಸೈಂಟ್ ಪೀಟರ್ ಕ್ಲೇವರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು. ವಿದ್ಯಾರ್ಥಿನಿ ಪ್ರತೀಕ್ಷಾ ವಿಶ್ವ ಪರಿಸರ ದಿನದ ಮಹತ್ವವನ್ನು ವಿವರಿಸಿದರು. ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಡೆಸಿದ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಶಾಲಾ ಸಂಚಾಲಕ ಫಾ. ಎಲಿಯಸ್ ಡಿಸೋಜರವರು ಮಾತನಾಡಿ ವಿದ್ಯಾರ್ಥಿಗಳು ತಮ್ಮ ಪರಿಸರವನ್ನು ಸಂರಕ್ಷಣೆ ಮಾಡಿ ಹೆಚ್ಚು ಗಿಡಮರಗಳನ್ನು ನೆಟ್ಟು ಬೆಳೆಸ ಬೇಕು ಎಂದರು. ನೂತನ ಕಿಚನ್ ಗಾರ್ಡನ್ ನಲ್ಲಿ ತರಕಾರಿ ಗಿಡಗಳನ್ನು ನೆಡಲಾಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕಿ ಮೋನಿಕಾ ಡಿಸೋಜಾ, ಶಿಕ್ಷಕ – ಶಿಕ್ಷಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಲೆನ್ವಿಶ ಸ್ವಾಗತಿಸಿದರು. ಅನ್ವಿಶಾ ಕಾರ್ಯಕ್ರಮ ನಿರೂಪಿಸಿದರು. ಪ್ರಾಪ್ತಿ ಎಂ.ಆರ್. ಧನ್ಯವಾದವಿತ್ತರು.

Exit mobile version