ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬಕ್ರೀದ್ ಹಬ್ಬ ಆಚರಣೆ

0

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬಕ್ರೀದ್ ಹಬ್ಬದ ಆಚರಣೆಯನ್ನು ಜೂ.6ರಂದು ಸೇಕ್ರೆಡ್ ಹಾರ್ಟ್ ಸಭಾಭವನದಲ್ಲಿ ಆಚರಿಸಲಾಯಿತು.

ಈ ಕಾರ್ಯಕ್ರಮವನ್ನು ಪ್ರಾರ್ಥನಾ ವಿಧಿಯೊಂದಿಗೆ ಪ್ರಾರಂಭಿಸಲಾಯಿತು. ವಿದ್ಯಾರ್ಥಿಗಳು ಬಕ್ರೀದ್ ಹಬ್ಬದ ಆಚರಣೆಯನ್ನು ಹಾಡು, ನೃತ್ಯದ ಮೂಲಕ ಪ್ರದರ್ಶಿಸಿದರು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಮಡಂತ್ಯಾರು ಚರ್ಚಿನ ಸಹಾಯಕ ಧರ್ಮ ಗುರು ಸ್ವಾ ಲ್ಯಾರಿ ಫ್ರಾಂಕ್ಲಿನ್ ಪಿಂಟೋ ಆಗಮಿಸಿದ್ದರು. ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ನಾವು ಬೇರೆಯವರಿಗೆ ದಾನ ಮಾಡಿದರೆ ನಮಗೆ ದೇವರು ಅದಕ್ಕಿಂತ ಜಾಸ್ತಿ ಕೊಡುತ್ತಾನೆ ಎಂದು ಹೇಳಿ ವಿದ್ಯಾರ್ಥಿಗಳಿಗೆ ಬಕ್ರೀದ್ ಹಬ್ಬದ ಶುಭಾಶಯವನ್ನು ಕೋರಿದರು.

ಶಾಲಾ ಮುಖ್ಯೋಪಾಧ್ಯಾಯ ಸ್ವಾ| ದೀಪಕ್ ಲಿಯೋ ಡೇಸ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ನಾವು ತ್ಯಾಗ ಮಾಡುವುದರ ಜೊತೆಗೆ ಬೇರೆಯವರ ಬಗ್ಗೆ ಕಾಳಜಿ ವಹಿಸಬೇಕೆಂದು ಹೇಳಿ ವಿದ್ಯಾರ್ಥಿಗಳಿಗೆ ಬಕ್ರೀದ್ ಹಬ್ಬದ ಶುಭಾಶಯಗಳು ಕೋರಿದರು. ಈ ಕಾರ್ಯಕ್ರಮವನ್ನು ಮಿನ್ಶ ಹನೀಫ್ ರವರು ಸ್ವಾಗತಿಸಿದರು. ರಿವಾನಿಯ ಶಾನ್ವಿ ನಿರೂಪಿಸಿ, ಮಹಮ್ಮದ್ ಫಾಹಿರh ರವರು ಧನ್ಯವಾದವನ್ನು ಸಮರ್ಪಿಸಿದರು.

LEAVE A REPLY

Please enter your comment!
Please enter your name here