Site icon Suddi Belthangady

ಜೆಇಇ ಅಡ್ವಾನ್ಸ್ ಪರೀಕ್ಷೆ: ಸಮೀಕ್ಷಾ ಬಿ. ಉತ್ತಮ ಸಾಧನೆ

ಬೆಳ್ತಂಗಡಿ: ರಾಷ್ಟ್ರಮಟ್ಟದಲ್ಲಿ ನಡೆದ ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ವೈಬ್ರೆಂಟ್ ಸಿ.ಎನ್.ಎಂ. ಪಿ.ಯು. ಕಾಲೇಜು ಮೈಸೂರಿನ ವಿದ್ಯಾರ್ಥಿಗಳು ಅತ್ಯುತ್ತಮ ರ‍್ಯಾಂಕ್ ಪಡೆದು ರಾಷ್ಟ್ರಮಟ್ಟದಲ್ಲಿ ಸಾಧನೆಗೈದಿದ್ದಾರೆ. ಮೂಡುಬಿದಿರೆಯ ವೈಬ್ರೆಂಟ್ ಎಜುಕೇಷನ್ ಮತ್ತು ಚಾರಿಟೇಬಲ್ ಟ್ರಸ್ಟ್ ನ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಕಾಲೇಜು ” ಮೊದಲ ವರ್ಷದ” ಫಲಿತಾಂಶದಲ್ಲಿಯೇ ಅತ್ಯುತ್ತಮ ರ‍್ಯಾಂಕ್ ಗಳಿಸುವ ಮೂಲಕ ಅಭೂತಪೂರ್ವ ಸಾಧನೆ ಮಾಡಿದೆ.

ವಿದ್ಯಾರ್ಥಿನಿ ಸಮೀಕ್ಷಾ ಬಿ. 6368 ರ‍್ಯಾಂಕ್ ಪಡೆಯುವ ಮೂಲಕ ಉತ್ತಮ ಸಾಧನೆ ಗೈದಿದ್ದಾರೆ. ಈ ಹಿಂದೆ ನಡೆದ ಬೋರ್ಡ್ ಪರೀಕ್ಷೆ ಹಾಗೂ ಸಿಇಟಿ ಪರೀಕ್ಷೆಯಲ್ಲಿಯೂ ಹಲವಾರು ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಗಳಿಸಿ ಪ್ರಶಂಸೆಗೆ ಪಾತ್ರರಾಗಿರುವುದು ಗಮನಾರ್ಹವಾಗಿದೆ. ವಿದ್ಯಾರ್ಥಿಗಳ ಈ ಸಾಧನೆಗೆ ಆಡಳಿತ ಮಂಡಳಿ, ಆಡಳಿತಾಧಿಕಾರಿ, ಪ್ರಾಂಶುಪಾಲರು ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.

Exit mobile version