


ಗುರುವಾಯನಕೆರೆ: ಎಕ್ಸೆಲ್ ಟೆಕ್ನೋ ಸ್ಕೂಲ್ ಪ್ರಾರಂಭೋತ್ಸವವು ಜೂ.9ರಂದು ವಿದ್ಯಾಸಾಗರ್ ಕ್ಯಾಂಪಸ್ ನಲ್ಲಿ ನಡೆಯಿತು. ವಿದ್ಯಾರ್ಥಿಗಳನ್ನು ಆರತಿ ಬೆಳಗಿಸಿ, ಹೂ ನೀಡಿ, ಬ್ಯಾಂಡ್ ಸೆಟ್, ಗೊಂಬೆಗಳ ಆಕರ್ಷಕ ಮೆರವಣಿಗೆ ಮೂಲಕ ಮಕ್ಕಳನ್ನು ಶಿಕ್ಷಕರು ಬರಮಾಡಿಕೊಂಡರು. ನರ್ಸರಿ, ಎಲ್.ಕೆ.ಜಿ., ಯು.ಕೆ.ಜಿ, 1ನೇ ತರಗತಿಗೆ ವಿದ್ಯಾರ್ಥಿಗಳು ಖುಷಿಯಿಂದ ಹೆಜ್ಜೆ ಹಾಕಿದರು. ಎಕ್ಸೆಲ್ ವಿದ್ಯಾಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿ ಸಂಸ್ಕಾರಯುತ ಗುಣಮಟ್ಟದ ಶಿಕ್ಷಣದೊಂದಿಗೆ ಮೌಲ್ಯಾಧಾರಿತ ಶಿಕ್ಷಣ ನೀಡಿ ಮಕ್ಕಳನ್ನು ದೇಶದ ಉತ್ತಮ ಪ್ರಜೆಗಳಾಗಿ ರೂಪಿಸಲಾಗುವುದು ಎಂದರು.



ಕಾಲೇಜು ಪ್ರಾಂಶುಪಾಲ ಡಾ. ನವೀನ್ ಕುಮಾರ್ ಮರಿಕೆ, ಸಹನಾ ಜೈನ್, ಅರಮಲೆಬೆಟ್ಟ ಕ್ಯಾಂಪಸ್ ಪ್ರಾಂಶುಪಾಲ ಡಾ.ಪ್ರಜ್ವಲ್, ಕ್ಯಾಂಪಸ್ ಮ್ಯಾನೇಜರ್ ಶಾಂತಿರಾಜ್ ಜೈನ್, ಎ.ಒ. ಕೀರ್ತಿನಿಧಿ ಜೈನ್, ಎಕ್ಸೆಲ್ ವೇಣೂರು ಪ್ರೌಢ ಶಾಲಾ ಪ್ರಾಂಶುಪಾಲೆ ಸುಜಾತಾ ಬಿ., ಸಿಬ್ಬಂದಿ ವರ್ಗದವರು, ಚಿದಾನಂದ ಇಡ್ಯಾ, ಕಿರಣ್ ಕುಮಾರ್ ಶೆಟ್ಟಿ, ಮೊದಲಾದವರು ಉಪಸ್ಥಿತರಿದ್ದರು.









