ಕಾಶಿಪಟ್ಣ: ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

0

ಕಾಶಿಪಟ್ಣ: ಜೂ.10ರಂದು ಪ್ರೌಢ ಶಾಲಾ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳು 2024-25ನೇ ಅಂತಿಮ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲು ಮಾಡಿದ ಸಂಭ್ರಮದಲ್ಲಿ ಎಲ್ಲಾ ತೇರ್ಗಡೆಯಾದ ವಿದ್ಯಾರ್ಥಿಗಳನ್ನು ಮತ್ತು ಪ್ರಾಧ್ಯಾಪಕ ವೃಂದದವರನ್ನು ಕಾಶಿಪಟ್ಣ ಗ್ರಾಮ ಪಂಚಾಯತ್ ವತಿಯಿಂದ ಪುರಮೆರವಣಿಗೆಯಲ್ಲಿ ಕರೆತಂದು ಗೌರವಿಸಿ ಸನ್ಮಾನಿಸಲಾಯಿತು. ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ, ಎಲ್ಲಾ ಸದಸ್ಯರು, ಸಿಬ್ಬಂದಿ ವರ್ಗ, ಹಳೆವಿದ್ಯಾರ್ಥಿಗಳು, ಮಕ್ಕಳ ಪೋಷಕರು, ಗರೋಡಿ ಫ್ರೆಂಡ್ಸ್ ನ ಅಧ್ಯಕ್ಷ, ಸದಸ್ಯರು ಹಾಗೂ ವಿದ್ಯಾಭಿಮಾನಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here