ಧರ್ಮಸ್ಥಳ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ಸಪ್ತಾಹ ಉದ್ಘಾಟನೆ

0

ಧರ್ಮಸ್ಥಳ : ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಯೋಗ ಸಪ್ತಾಹ ಉದ್ಘಾಟನಾ ಸಮಾರಂಭವು ಶಾಲೆಯ ಕ್ರೀಡಾ ಸಂಘ, ಭಾರತ್ ಸ್ಕೌಟ್ಸ್ ಹಾಗೂ ಗೈಡ್ಸ್ ಮತ್ತು ಕಬ್ ಮತ್ತು ಬುಲ್ ಬುಲ್ ಸಂಘಗಳ ಜಂಟಿ ಆಶ್ರಯದಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಕಾಲೇಜಿನ ವಿದ್ಯಾರ್ಥಿಗಳಾದ ಕುಮಾರಿ ಸಾನಿಧ್ಯ ಹಾಗೂ ಕುಮಾರಿ ಅನನ್ಯ ಯೋಗ ತರಬೇತುದಾರರಾಗಿ ಆಗಮಿಸಿ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅನನ್ಯ ಯೋಗದ ಮಹತ್ವ ಯೋಗದ ಅವಶ್ಯಕತೆ ವಿದ್ಯಾರ್ಥಿಗಳಿಗೆ ಯೋಗದಿಂದ ಆಗುವ ಉಪಯೋಗ ಇತ್ಯಾದಿಗಳನ್ನು ಕೂಲಂಕುಶವಾಗಿ ವಿವರಿಸಿದರು.

ಶಾಲಾ ಮುಖ್ಯೋಪಾಧ್ಯಾಯಿನಿ ಪರಿಮಳ ಎಂ.ವಿ. ಯೋಗದಿಂದ ಹೇಗೆ ಮಾನಸಿಕ ಆರೋಗ್ಯ ಮತ್ತು ನೆಮ್ಮದಿಯನ್ನು ಕಂಡುಕೊಳ್ಳಬಹುದು. ಪ್ರಸ್ತುತ ದಿನದಲ್ಲಿ ಯೋಗದ ಅವಶ್ಯಕತೆ ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ಅಂಶಗಳ ಕುರಿತು ವಿಸ್ತಾರವಾಗಿ ವಿವರಿಸಿದರು.

ತರಬೇತುದಾರರು ವಿದ್ಯಾರ್ಥಿಗಳಿಗೆ ಪ್ರಾಣಾಯಾಮ ಹಾಗೂ ಇನ್ನಿತರ ಯೋಗಾಸನಾದ ಆಸನಗಳನ್ನು ತಿಳಿಸಿಕೊಟ್ಟರು.

ಶಾಲಾ ವಿದ್ಯಾರ್ಥಿನಿ ಅನುಜ್ಞ ಕಾರ್ಯಕ್ರಮ ನಿರ್ವಹಿಸಿದರು. ಶಾಲಾ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here