Site icon Suddi Belthangady

ನಿಡ್ಲೆ:ಪ್ರೌಢ ಶಾಲೆಗೆ ಶೇ. 100 ಫಲಿತಾಂಶ:ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

ನಿಡ್ಲೆ: ಸರ್ಕಾರಿ ಪ್ರೌಢ ಶಾಲೆಯಲ್ಲಿ ಜೂ.14ರಂದು ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ 100 ಶೇ. ಫಲಿತಾಂಶ ತಂದುಕೊಟ್ಟ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು.

ದತ್ತಿನಿಧಿ ಮತ್ತು ಶಾಲಾ ವತಿಯಿಂದ ನಗದು ಪುರಸ್ಕಾರದೊಂದಿಗೆ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಎಸ್‌.ಡಿ.ಎಂ.ಸಿ ಅಧ್ಯಕ್ಷ ಪುರುಷೋತ್ತಮ ಗೌಡ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಮುಖ್ಯ ಶಿಕ್ಷಕ ರಾಜಗುರು ಹೆಬ್ಬಾರ್, ಗ್ರಾಮ ಪಂಚಾಯತ್ ಸದಸ್ಯ ಜಗದೀಶ್, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಕೃಷ್ಣಪ್ರಸಾದ್, ಎಸ್. ಡಿ. ಎಮ್. ಸಿ ಸದಸ್ಯರು, ಪೋಷಕರು ಶಾಲಾ ಮುಖ್ಯ ಶಿಕ್ಷಕಿ ಶಾಂತಾ ಶೆಟ್ಟಿ , ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು. ಶಿಕ್ಷಕರು ಮತ್ತು ಅತಿಥಿಗಳು ವಿದ್ಯಾರ್ಥಿಗಳಿಗೆ ಶುಭ ಕೋರಿದರು. ಶಿಕ್ಷಕಿ ಸುಚಿತ್ರಾ ಕಾರ್ಯಕ್ರಮ ನಿರೂಪಿಸಿದರು.

Exit mobile version