ಬಂದಾರು: ತಾಲೂಕಿನಲ್ಲಿ ಎಡೆಬಿಡದೆ ಸುರಿಯುತ್ತಿರುವ ವಿಪರೀತ ಮಳೆಗೆ ಗುಡ್ಡ ಕುಸಿದು ಮನೆಗೆ ಹಾನಿ: ಶಾಸಕ ಹರೀಶ್ ಪೂಂಜ ಭೇಟಿ: ಸರ್ಕಾರದಿಂದ ಶೀಘ್ರ ಪರಿಹಾರ ಒದಗಿಸಲು ಅಧಿಕಾರಿಗಳಿಗೆ ಸೂಚನೆ

0

ಬಂದಾರು: ಜೂ.17ರಂದು ತಾಲೂಕಿನಲ್ಲಿ ಸುರಿಯುತ್ತಿರುವ ವಿಪರೀತ ಮಳೆಯ ಪರಿಣಾಮ ಬಂದಾರು ಗ್ರಾಮ ಮೈರೋಳ್ತಡ್ಕ ಮುಂಡೂರು ನಿವಾಸಿ ಗಿರಿಯಪ್ಪರವರ ಮನೆಗೆ ಬೃಹತ್ ಗಾತ್ರದ ಗುಡ್ಡ ಕುಸಿದು ಮನೆಗೆ ಹಾನಿಯಾಗಿದ್ದು, ವಾಸಕ್ಕೆ ತುಂಬಾ ಕಷ್ಟ ಸಾಧ್ಯವಾಗಿದೆ. ಮರ ಹಾಗೂ ಗುಡ್ಡ ಕುಸಿದು ಮನೆಗೆ ಸಂಪೂರ್ಣ ಹಾನಿಯಾಗುವ ಪರಿಸ್ಥಿತಿ ನಿರ್ಮಾಣವಾಗಿದೆ.

ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಪರಿಶೀಲನೆ ನಡೆಸಿ, ಆರ್ಥಿಕ ಸಹಾಯ ನೀಡಿ, ಸರಕಾರದಿಂದ ಶೀಘ್ರ ಪರಿಹಾರ ಒದಗಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು. ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಬೆಳ್ತಂಗಡಿ ಮಂಡಲ ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ಗಿರೀಶ್ ಗೌಡ ಬಿ.ಕೆ., ಪ್ರಮುಖರಾದ ಪ್ರಶಾಂತ್ ಗೌಡ ನಿರುoಬುಡ ಹಾಗೂ ಮನೆಯವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here