Site icon Suddi Belthangady

ಜೂ.22: ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಜನರಲ್‌ ಸರ್ಜರಿ ತಪಾಸಣಾ ಶಿಬಿರ

ಉಜಿರೆ: ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜೂ.22ರಂದು ಬೆಳಿಗ್ಗೆ 9.00ರಿಂದ ಮಧ್ಯಾಹ್ನ 100ರವರೆಗೆ ಉಚಿತ ಜನರಲ್ ಸರ್ಜರಿ ತಪಾಸಣಾ ಶಿಬಿರ ನಡೆಯಲಿದೆ.

ಜನರಲ್ ಸರ್ಜನ್ ಡಾ.ಬಾಲಾಜಿ ಪ್ರಭಾಕರನ್ MBBS, MS (General Surgery) का MBBS, MS (General Surgery) ತಪಾಸಣೆ ನಡೆಸಲಿದ್ದಾರೆ. ಈ ಶಿಬಿರದಲ್ಲಿ ವೈದ್ಯರ ಸಮಾಲೋಚನೆ ಉಚಿತವಾಗಿದ್ದು, 10% ರಿಯಾಯಿತಿ ದರದಲ್ಲಿ ಔಷಧ, ಒಳರೋಗಿ ವಿಭಾಗದ ಶುಲ್ಕದಲ್ಲಿ 20% ರಿಯಾಯಿತಿ, ಲ್ಯಾಬ್‌ ಹಾಗೂ ರೇಡಿಯಾಲಜಿ ಪರೀಕ್ಷೆಯಲ್ಲಿ 20% ರಿಯಾಯಿತಿ ದೊರೆಯಲಿದೆ.

ಸಾಮಾನ್ಯ ಶಸ್ತ್ರಚಿಕಿತ್ಸಾ ತಪಾಸಣೆ, ಹರ್ನಿಯಾ (ಕಿಬೊಟ್ಟೆ, ತೊಡೆಸಂದು, ಹೊಕ್ಕಳು) ಕಡಿಮೆ ಮಾಡಬಹುದಾದ ಊತ, ಪಿತ್ತಕೋಶದ ಕಲ್ಲುಗಳು, ಕಬೊಟ್ಟೆಯ ನೋವು, ಕಾಮಾಲೆ, ಅಪೆಂಡಿಸೈಟಿಸ್ (ಕೆಳಗಿನ ಬಲ ಹೊಟ್ಟೆ ನೋವು, ಮೂಲವ್ಯಾದಿ, ಪಿಸ್ತುಲಾ, ವೃಷಣಗಳ ನೋವು ರಹಿತ ಊತ, ಚರ್ಮದ ಗಾಯಗಳು ಮತ್ತು ಗೆಡ್ಡೆಗಳ ತಪಾಸಣೆ ನಡೆಸಲಾಗುವುದು ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version