ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಬಿಸಿ ಊಟಕ್ಕೆ ಚಾಲನೆ

0

ಉಜಿರೆ: “ಮಕ್ಕಳು ಪೌಷ್ಠಿಕ, ಆರೋಗ್ಯಕರ ಆಹಾರವನ್ನು ಸೇವಿಸಬೇಕು. ಆಹಾರವನ್ನು ಪೋಲು ಮಾಡಬಾರದು” ಎಂದು ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ಮಾಹಿತಿ ಮತ್ತು ತಂತ್ರಜ್ಞಾನ ವಿಭಾಗದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ವಿದ್ಯಾರ್ಥಿ ನಿಲಯಗಳ ಆಡಳಿತಗಾರ ಪೂರನ್ ವರ್ಮ ಹೇಳಿದರು. ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ 2025-26ರ ಶೈಕ್ಷಣಿಕ ವರ್ಷದ ಮಧ್ಯಾಹ್ನದ ಬಿಸಿ ಊಟ ಚಾಲನೆ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು.

ಎಸ್.ಡಿ.ಎಮ್ ವಿದ್ಯಾರ್ಥಿ ನಿಲಯಗಳ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಯುವರಾಜ್ ಪೂವಣಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ಮನ್ಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.

LEAVE A REPLY

Please enter your comment!
Please enter your name here