Site icon Suddi Belthangady

ಬೆಳ್ತಂಗಡಿ: ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟ ಆರೋಗ್ಯ ಇಲಾಖೆಗೆ ಭೇಟಿ ಹಾಗೂ ಪರಿಸರ ದಿನಾಚರಣೆ

ಬೆಳ್ತಂಗಡಿ: ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟದ ಆಡಳಿತ ಮಂಡಳಿಯ ಸಭೆ,‌ ಆರೋಗ್ಯ ಇಲಾಖೆ ಭೇಟಿ ಹಾಗೂ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಜೂ. 20ರಂದು ಬೆಳ್ತಂಗಡಿಯಲ್ಲಿ ಆಯೋಜಿಸಲಾಗಿತ್ತು.

ತಾಲೂಕು ಒಕ್ಕೂಟದ ಅಧ್ಯಕ್ಷೆ ಮಂಜುಳಾ ಅಧ್ಯಕ್ಷತೆಯನ್ನು ವಹಿಸಿದ್ದರು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕ ಫಾ.ಬಿನೋಯಿ ಎ.ಜೆ. ಇಲಾಖಾ ಭೇಟಿ ಮೂಲಕ ಜಾಲಬಂಧ ಬೆಳೆಸುವ ಬಗ್ಗೆ ಮಾಹಿತಿ ನೀಡಿದರು. ತಾಲೂಕು ಒಕ್ಕೂಟದ ಅಧ್ಯಕ್ಷೆ ಮಂಜುಳಾ ಒಕ್ಕೂಟದಿಂದ ಮಾಡಬಹುದಾದ ಕೆಲಸಗಳ ಬಗ್ಗೆ ತಿಳಿಸಿದರು. ಬಳಿಕ ಸಮುದಾಯ ಆರೋಗ್ಯ ಕೇಂದ್ರ ಬೆಳ್ತಂಗಡಿಗೆ ಭೇಟಿ ನೀಡಿ ಅಲ್ಲಿನ ಸೌಲಭ್ಯಗಳ ಬಗ್ಗೆ ತಾಲೂಕು ಆರೋಗ್ಯಾಧಿಕಾರಿ ಡಾ. ಸಂಜಾತ್ ಮಾಹಿತಿ ನೀಡಿದರು. ಆರೋಗ್ಯ ಕೇಂದ್ರ ವಠಾರದಲ್ಲಿ ಹಣ್ಣಿನ ಗಿಡ ನೆಡುವ ಮೂಲಕ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಅಮ್ಮಿ, ಸಂಯೋಜಕಿ ಸಿಸಿಲ್ಯಾ ತಾವ್ರೊ, ಕಾರ್ಯಕರ್ತ ಮಾರ್ಕ್ ಡಿಸೋಜಾ, ತಾಲೂಕು ಒಕ್ಕೂಟದ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ಸಂಧ್ಯಾ ಎಲ್ಲರನ್ನು ಸ್ವಾಗತಿಸಿದರು. ಪ್ರಾರ್ಥನೆಯನ್ನು ತಾಲೂಕು ಒಕ್ಕೂಟದ ಉಪಾಧ್ಯಕ್ಷೆ ಜಿನ್ಸಿ ರಾಜೇಶ್ ಹಾಗೂ ಕಾರ್ಯದರ್ಶಿ ಉಷಾ ನೆರವೇರಿಸಿದರು. ಮಂಜುಳಾ ವಂದಿಸಿದರು.

Exit mobile version