ಪುದುವೆಟ್ಟು: ಜೂ. 13ರಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಮಾಹಿತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು. ನೆರಿಯ ಸರಕಾರಿ ಆಸ್ಪತ್ರೆಯ ಆರೋಗ್ಯ ಸಹಾಯಕಿ ಮೆರ್ಲಿನ್ ಆಗಮಿಸಿ ವಿದ್ಯಾರ್ಥಿಗಳಿಗೆ ಡೆಂಗ್ಯೂ ಮಲೇರಿಯಾ ಹಾಗೂ ಇತರೆ ಕಾಯಿಲೆಗಳ ಬಗ್ಗೆ ಮಾಹಿತಿ ನೀಡಿದರು. ಶಾಲೆ ಮುಖ್ಯ ಶಿಕ್ಷಕ ಶೀನಪ್ಪ ಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಾಲೆಯ ಎಲ್ಲ ಶಿಕ್ಷಕರು ಉಪಸ್ಥಿತರಿದ್ದು ಸಹಕರಿಸಿದರು.