ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್‌.ಇ) ಉಜಿರೆಯಲ್ಲಿ ಶಾಲಾ ವಿದ್ಯಾರ್ಥಿ ಸಂಸತ್ತಿನ ಉದ್ಘಾಟನಾ ಕಾರ್ಯಕ್ರಮ

0

ಉಜಿರೆ: “ಕಠಿಣ ಪರಿಶ್ರಮ ಮತ್ತು ಬುದ್ಧಿವಂತಿಕೆಯಿಂದ ಕೆಲಸ ಮಾಡಬೇಕು. ಯಶಸ್ಸನ್ನು ಸಾಧಿಸುವ ಹಸಿವು ಸದಾ ಇರಬೇಕು.” ಎಂದು ಶ್ರೀ ಧರ್ಮಸ್ಥಳದ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ಧನ ಹೇಳಿದರು. ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್‌.ಇ)ಯಲ್ಲಿ ನಡೆದ ಶಾಲಾ ವಿದ್ಯಾರ್ಥಿ ಸಂಸತ್ತಿನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ, ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವೇದಿಕೆಯಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಶಾಲಾ ಮುಖ್ಯೋಪಾಧ್ಯಾಯ ಮನ್ಮೋಹನ್ ನಾಯ್ಕ್ ಕೆ.ಜಿ., ಹಳೆ ವಿದ್ಯಾರ್ಥಿ ಹಾಗೂ ಶಾಲಾ ನಾಯಕನಾಗಿದ್ದ ಪ್ರಾಂಜಲ್ ಶೆಟ್ಟಿ ಹಾಗೂ ಪ್ರಸ್ತುತ ಶಾಲಾ ನಾಯಕನಾಗಿ ಆಯ್ಕೆಗೊಂಡಿರುವ ಸಿಯೋನ್ ರಾಜ್ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ಶಶಾಂಕ್ ಮತ್ತು ಕ್ರಿಸ್ಟಿ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯ ಮನ್ಮೋಹನ್ ನಾಯ್ಕ್ ಕೆ.ಜಿ. ಸ್ವಾಗತಿಸಿ, ವಿದ್ಯಾರ್ಥಿ ಚಿಂತನ್ ವಂದಿಸಿದರು.

LEAVE A REPLY

Please enter your comment!
Please enter your name here