Site icon Suddi Belthangady

ದಯಾ ವಿಶೇಷ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

ಬೆಳ್ತಂಗಡಿ: ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ದಯಾ ವಿಶೇಷ ಶಾಲೆಯಲ್ಲಿ ವಿಶೇಷ ಮಕ್ಕಳಿಂದ ಯೋಗಭ್ಯಾಸ ಕಾರ್ಯಕ್ರಮವು ಜೂ.21ರಂದು ಜರುಗಿತು.

ಯೋಗದ ಮಹತ್ವ ಹಾಗೂ ದೈನಂದಿನ ಜೀವನದಲ್ಲಿ ಯೋಗಭ್ಯಾಸವನ್ನು ಅಳವಡಿಸಿಕೊಳ್ಳುವುದರಿಂದಾಗುವ ಪ್ರಯೋಜನದ ಬಗ್ಗೆ ಅರಿವನ್ನು ಮೂಡಿಸಲಾಯಿತು.

ಶಾಲಾ ಶಿಕ್ಷಕರು ಮಕ್ಕಳಿಗೆ ವಿವಿಧ ಯೋಗಾಸನ ಭಂಗಿಗಳನ್ನು ಮಾಡಿಸುವಲ್ಲಿ ನೆರವಾದರು. ಈ ಕಾರ್ಯಕ್ರಮದಲ್ಲಿ ಶಾಲೆಯ ವಿಶೇಷ ಮಕ್ಕಳು, ಶಿಕ್ಷಕರು ಹಾಗೂ ಸಿಬ್ಬಂದಿಗಳು ಭಾಗವಹಿಸಿದರು.

Exit mobile version