ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂ.21ರಂದು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಸಭಾಸದರಲ್ಲಿ ಮುಖ್ಯ ಅತಿಥಿಯಾಗಿ ನಿವೃತ್ತ ಶಿಕ್ಷಕರು ಹಾಗೂ ನುರಿತ ಕೃಷಿಕರು ಆಗಿರುವ ಪ್ರಭಾಕರ್ ಮಯ್ಯ ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಟ್ರಸ್ಟಿನ ಸಂಚಾಲಕ ಜನಾಬ್ ಸಯ್ಯದ್ ಹಬೀಬ್ ಸಾಹೇಬ್ ವಹಿಸಿಕೊಂಡಿದ್ದರು.

ಕಾರ್ಯಕ್ರಮದ ವೇದಿಕೆಯಲ್ಲಿ ಶಾಲಾ ಆಡಳಿತ ಟ್ರಸ್ಟಿನ ಕಾರ್ಯದರ್ಶಿ ಸಯ್ಯದ್ ಮಹಮ್ಮದ್ ಅಯ್ಯುಬ್, ಕೋಶಾಧಿಕಾರಿ ಸಯ್ಯದ್ ಮಹಮ್ಮದ್ ಇರ್ಫಾನ್, ಶಾಲಾ ಮುಖ್ಯೋಪಾಧ್ಯಾಯಿನಿ ಜಾಕಿನ್ ಬಿನ್ ಉಪಸ್ಥಿತರಿದ್ದರು.
ಶಾಲಾ ಶಿಕ್ಷಕರ ಯೋಗ ಪ್ರದರ್ಶನದ ಮೂಲಕ ಶಾಲಾ ಮುಖ್ಯೋಪಾಧ್ಯಾಯಿನಿ ಜಾಕಿನ್ ಬಿನ್ ರವರು ಕಾರ್ಯಕ್ರಮಕ್ಕೆ ವಿಶಿಷ್ಟ ವಾಗಿ ಚಾಲನೆಯನ್ನು ನೀಡಿದರು.
ಮುಖ್ಯ ಅತಿಥಿಯಾಗಿ ಮಾತನಾಡಿದ ಪ್ರಭಾಕರ ಮಯ್ಯ ಅವರು “ಯೋಗ ಮಾಡಿ ರೋಗ ದೂರ ಮಾಡಿ, ಯೋಗದಿಂದ ಮನಸ್ಸಿಗೆ ಶಾಂತಿ ದೇಹಕ್ಕೆ ಶಕ್ತಿ ಸಿಗುತ್ತದೆ ” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು ವಿವಿಧ ಯೋಗಾಸನಗಳನ್ನು ಪ್ರದರ್ಶಿಸಿದರು.ಮುಹಮ್ಮದ್ ಸುಹೖಬ್ ಅತಿಥಿ ಗಳಿಗೆ ಸ್ವಾಗತ ಕೋರಿದರು, 9ನೇ ತರಗತಿಯ ವಿದ್ಯಾರ್ಥಿನಿ ಪಾತಿಮತ್ ಪಾಯಿಝ ಕಾರ್ಯಕ್ರಮವನ್ನು ನಿರೂಪಿಸಿ, ಜಲಾಲುದ್ದಿನ್ ಮುನಾವ್ವರ್ ವಂದನಾರ್ಪಣೆ ಸಮರ್ಪಿಸಿದರು.