
ಕಲ್ಮಂಜ: ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಕಲ್ಮಂಜ ಬಿಜೆಪಿ ಘಟಕದಿಂದ ಕಲ್ಮಂಜ ಗ್ರಾಮ ಪಂಚಾಯತಿ ಮುಂಭಾಗದಲ್ಲಿ ಜೂ.23ರಂದು ಪ್ರತಿಭಟನೆ ನಡೆಯಿತು.
ಕಾಂಗ್ರೆಸ್ ಸರ್ಕಾರದಿಂದ ಯಾವುದೇ ಅನುದಾನಗಳು ಬಿಡುಗಡೆ ಆಗುತ್ತಿಲ್ಲ, ಕಾಂಗ್ರೆಸ್ ಸರಕಾರ ಜನರ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡುತ್ತಿದೆ. ವಿದ್ಯುತ್, ಬಸ್ ದರ, ತೆರಿಗೆಗಳನ್ನು ಸರಕಾರ ಹೆಚ್ಚುವರಿ ಮಾಡುತ್ತಿದೆ ಎಂದು ಆರೋಪಿಸಿದರು. ನಂತರ ವಿವಿಧ ಬೇಡಿಕೆಗಳನ್ನು ಒಳಗೊಂಡ ಮನವಿಯನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರ ಮೂಲಕ ರಾಜ್ಯಪಾಲರಿಗೆ ಸಲ್ಲಿಸಲಾಯಿತು.
ಪಂಚಾಯತ್ ಅಧ್ಯಕ್ಷ ವಿಮಲ, ಉಪಾಧ್ಯಕ್ಷ ಶ್ರೀಧರ್, ಸದಸ್ಯರಾದ ಕೃಷ್ಣಪ್ಪ, ಪ್ರಮುಖರಾದ ಚೇತನ್, ರಾಜೇಶ್ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.