ಪೋಕ್ಸೋ ಕಾಯ್ದೆ ಮತ್ತು ಬಾಲ್ಯವಿವಾಹ ನಿಷೇಧ ಕಾಯಿದೆ ಕುರಿತು ಮಾಹಿತಿ ಕಾರ್ಯಕ್ರಮ

0

ಧರ್ಮಸ್ಥಳ: ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ಜೂ. 23ರಂದು ಪೋಕ್ಸೋ ಕಾಯ್ದೆ ಮತ್ತು ಬಾಲ್ಯವಿವಾಹ ನಿಷೇಧ ಕಾಯಿದೆ ಕುರಿತು ಮಾಹಿತಿ ಕಾರ್ಯಕ್ರಮ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಬೆಳ್ತಂಗಡಿ ತಾಲೂಕು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಕಚೇರಿಯ ಧರ್ಮಸ್ಥಳ ವಲಯದ ಮಹಿಳಾ ಮೇಲ್ವಿಚಾರಕಿ ಲಲಿತ ಭಾಗವಹಿಸಿದರು.

ಮಕ್ಕಳ ಹಕ್ಕುಗಳು ಮತ್ತು ಕಾಯ್ದೆಗಳ ಬಗ್ಗೆ ಅವರು ತಿಳಿಸಿದರು. ಮಕ್ಕಳಿಗೆ ಸೇಫ್ ಮತ್ತು ಅನ್ಸೆಫ್ ಟಚ್ ಬಗ್ಗೆ ಮಾಹಿತಿ ನೀಡಿದರು. ದೌರ್ಜನ್ಯಕ್ಕೆ ಒಳಗಾದ ಸಂದರ್ಭ ಕೈಗೊಳ್ಳಬೇಕಾದ ಕ್ರಮ ಕುರಿತು ಮಕ್ಕಳ ಜೊತೆ ಸಂವಾದ ನಡೆಸಿ ಮಾಹಿತಿ ನೀಡಿದರು. ಮುಖ್ಯ ಶಿಕ್ಷಕಿ ಜಯಶ್ರೀ ಜೈನ್ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು. ಅಂಗನವಾಡಿ ಕೇಂದ್ರದ ಶಿಕ್ಷಕಿ ಬಿಂದು ಉಪಸ್ಥಿತರಿದ್ದರು.

ಕಾರ್ಯಕ್ರಮ ಸಂಯೋಜಕ, ಹಿರಿಯ ಶಿಕ್ಷಕ ಲಿಂಗಪ್ಪಗೌಡ ಸ್ವಾಗತಿಸಿದರು. ಶಿಕ್ಷಕಿ ತುಷಾರ ವಂದಿಸಿದರು.

LEAVE A REPLY

Please enter your comment!
Please enter your name here