






ಬೆಳ್ತಂಗಡಿ: ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬೆಳ್ತಂಗಡಿ ಇಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ಜೂ.27ರಂದು ಪೂರ್ವಾಹ್ನ 10.30ರಿಂದ ಮುಂಗಾರು ಹಂಗಾಮಿನ ರೈತರ ಬೆಳೆ ಸಮೀಕ್ಷೆ ತಂತ್ರಾಂಶದ ಕುರಿತು ಮತ್ತು ಅಡಿಕೆ ಹಾಗೂ ತೆಂಗು ಬೆಳೆಗಳ ಸಮಗ್ರ ರೋಗ, ಕೀಟ ನಿರ್ವಹಣೆ ಹಾಗೂ ಬೋರ್ಡೋ ದ್ರಾವಣ ತಯಾರಿ ಮತ್ತು ಮುಂಗಾರು ಹಂಗಾಮಿನಲ್ಲಿ ತೋಟದ ಸಮಗ್ರ ನಿರ್ವಹಣೆ ಕುರಿತು ಒಂದು ದಿನದ ಸಾಂಸ್ಥಿಕ ತರಬೇತಿಯನ್ನು ಆಯೋಜಿಸಲಾಗಿದ್ದು, ಸಂಪನ್ಮೂಲ ವ್ಯಕ್ತಿಗಳಾಗಿ ಬೆಳ್ತಂಗಡಿ ಸಹಾಯಕ ತೋಟಗಾರಿಕೆ ಇಲಾಖೆಯ ಅಧಿಕಾರಿ ಮಹಾವೀರ ಶೆಬಣ್ಣವರ್ ಮತ್ತು ಪ್ರಗತಿಪರ ಕೃಷಿಕ ಪ್ರಭಾಕರ ಮಯ್ಯ ಸುರ್ಯ ಭಾಗವಹಿಸಲಿದ್ದಾರೆ. ತರಬೇತಿಯಲ್ಲಿ ಭಾಗವಹಿಸುವ ರೈತರಿಗೆ ಟೀ/ಕಾಫಿ ಊಟದ ವ್ಯವಸ್ಥೆ ಇದ್ದು, ಹೆಚ್ಚಿನ ಸಂಖ್ಯೆಯಲ್ಲಿ ರೈತರು ಭಾಗವಹಿಸುವಂತೆ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿರುತ್ತಾರೆ.








