
ಪದ್ಮುಂಜ: ಕಣಿಯೂರು ಗ್ರಾಮ ಪಂಚಾಯತಿಯಲ್ಲಿ ಕಣಿಯೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಮಹಿಳಾ ಮತ್ತು ಮಕ್ಕಳ ಕಾವಲು ಸಮಿತಿ ಸಭೆ ಜೂ.24ರಂದು ಕಣಿಯೂರು ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಪಂ ಅಧ್ಯಕ್ಷ ಸೀತಾರಾಮ ಮಡಿವಾಳ ಇವರ ಅಧ್ಯಕ್ಷತೆಯಲ್ಲಿ ಜರಗಿತು.
ಸದಸ್ಯ ಕಾರ್ಯದರ್ಶಿ ಪಂ. ಅಭಿವೃದ್ಧಿ ಅಧಿಕಾರಿ ಗೀತಾ ಸಭೆ ನಡೆಸಿಕೊಟ್ಟರು. ಉಪ್ಪಿನಂಗಡಿ ಪೋಲೀಸ್ ಅಧಿಕಾರಿ ನಿಂಗರಾಜು, ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷೆ ಗಾಯತ್ರಿ, ಸದಸ್ಯರಾದ ಸುಮತಿ, ಆಶಾ, ಕಾರ್ಯಕರ್ತೆ ಶಾಲಿನಿ ಪದ್ಮುಂಜ, ಅಂಗನವಾಡಿ ಕಾರ್ಯಕರ್ತೆ ಗುಲಾಬಿ, ಉರುವಾಲು ಅಂಗನವಾಡಿ ಕಾರ್ಯಕರ್ತೆ ಸರೋಜಿನಿ ಉಪಸ್ಥಿತರಿದ್ದರು. ಪಂ. ಕಾರ್ಯದರ್ಶಿ ರಮೇಶ್ ಕೆ. ಸ್ವಾಗತಿಸಿ, ಧನ್ಯವಾದ ಸಲ್ಲಿಸಿದರು.