ಮಚ್ಚಿನ: ಅಂತರಾಷ್ಟ್ರೀಯ ಯೋಗ ದಿನಾಚರಣೆ

0

ಮಚ್ಚಿನ: ಜೂ. 21ರಂದು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು.

ಮಚ್ಚಿನ ಗ್ರಾಮ ಪಂಚಾಯತ್ ಅರಿವು ಕೇಂದ್ರ ಮತ್ತು ಪ್ರಾಥಮಿಕ ಶಾಲೆ ಮಚ್ಚಿನ ಇವರ ಜಂಟಿ ಆಶ್ರಯದಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಆರ್ಟ್ ಆಫ್ ಲಿವಿಂಗ್ ಇದರ ಕಾರ್ಯಕರ್ತೆ ವೀಣಾ ಭಟ್ ವಿದ್ಯಾರ್ಥಿಗಳಿಗೆ ಕೆಲವೊಂದು ಆಸನಗಳು ಮತ್ತು ಪ್ರಾಣಾಯಾಮಗಳ ಬಗ್ಗೆ ತಿಳಿಸಿಕೊಟ್ಟರು. ವಿದ್ಯಾರ್ಥಿಗಳು ಮತ್ತು ಶಿಕ್ಷಕ ವೃಂದದವರು ಅತ್ಯಂತ ಉತ್ಸಾಹದಿಂದ ಪಾಲ್ಗೊಂಡರು. ಶಿಕ್ಷಕಿ ಮಮತಾ ಕಾರ್ಯಕ್ರಮಕ್ಕೆ ಎಲ್ಲರನ್ನು ಸ್ವಾಗತಿಸಿದರು. ಹಾಗೂ ಶಿಕ್ಷಕಿ ದಿವ್ಯ ಧನ್ಯವಾದವಿತ್ತರು.

LEAVE A REPLY

Please enter your comment!
Please enter your name here