ಕೊಕ್ಕಡ: ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ನ ಅಧ್ಯಕ್ಷ ಜಯೇಶ್, ಉಪಾಧ್ಯಕ್ಷ ಸಿದ್ದಗಂಗಯ್ಯ, ಕೋ ಆರ್ಡಿನೇಟರ್ ಡಾ.ಸದಾನಂದ ಕುಂದರ್, ನೆಲ್ಯಾಡಿ ಸಂತ ಜಾರ್ಜ್ ಪದವಿ ಪೂರ್ವ ಕಾಲೇಜಿನ ಸ್ಥಾಪಕ ಕಾರ್ಯದರ್ಶಿ ಅಬ್ರಹಾಂ ವರ್ಗೀಸ್ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಭೇಟಿ ನೀಡಿದರು. ಸೌತಡ್ಕ ಶ್ರೀ ಮಹಾಗಣಪತಿ ದೇವಾಲಯದ ವತಿಯಿಂದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸುಬ್ರಮಣ್ಯ ಶಬರಾಯ ಅವರು ಶಾಲು ಹಾಕಿ ಗೌರವ ಸಲ್ಲಿಸಿದರು.
ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಅಧ್ಯಕ್ಷ ಜಯೇಶ್ ಭೇಟಿ
